ಜಮ್ಮು-ಕಾಶ್ಮೀರ : ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳತ ಉಂಟಾಗಿದ್ದು, 12 ಭಕ್ತರು ಮೃತಪಟ್ಟಿದ್ದಾರೆ. ಸ್ಧಳೀಯ ಪೊಲೀಸರಿಂದ ರಕ್ಷಣಾ ಕಾರ್ಯಚರಣೆ ನಡೆದಿದೆ. ಗಾಯಾಳುಗಳನ್ನು ಸ್ಧಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸ ವರ್ಷಾಚರಣೆಗೆಂದು ಭಕ್ತರು ಭಾರೀ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಜಮಾವಣೆಗೊಂಡಿದ್ದರು. ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರದತ್ತ ನುಗ್ಗಿ ಬಂದಾಗ ಈ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಸಾವಿನ ಸಂಖ್ಯೆ ಏರುವ ಸಂಭವವಿದೆ. ಜಮ್ಮು ಕಾಶ್ಮೀರದಲ್ಲಿರುವ ತ್ರಿಕೂಟ ಬೆಟ್ಟಗಳಲ್ಲಿ ಮಾತಾ ವೈಷ್ಟೋದೇವಿ ಮಂದಿರವಿದ್ದು,ಅಲ್ಲಿ ಈ ಅವಘಡ ಸಂಭವಿಸಿದೆ.
ವೈಷ್ಟೋದೇವಿ ಪುಣ್ಯಕ್ಷೇತ್ರದಲ್ಲಿ ಮಾತಾ ವೈಷ್ಟೋದೇವಿ ಭವನದ ಬಳಿ ಬೆಳಗಿನ ಜಾವ 2.45ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.ಭವನದಲ್ಲಿ ಜಮಾಯಿಸಿದ್ದ ಜನರ ನಡುವೆ ಗಲಾಟೆ ಶುರುವಾಗಿದೆ.ಮಾತಿಗೆ ಮಾತು ಬೆಳೆದು ತಳ್ಳಾಟ ಜೋರಾಗಿದೆ.ಮುಂದೆ ಅದು ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ.
ಈ ಘಟನೆಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾತಾ ವೈಷ್ಟೋದೇವಿ ಭವನದಲ್ಲಿ ಕಾಲ್ತುಳಿತದಲ್ಲಿ ಜನರು ಸಾವನ್ನಪ್ಪಿದ್ದಕ್ಕಾಗಿ ನಾನು ತ್ರೀವ್ರ ದುಖಿತನಾಗಿದ್ದೇನೆ ಎಂದು ಅವರು ಟ್ವೀಟ್ನಲ್ಲಿ ಬರೆದಿದ್ದಾರೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುವುದರೊಂದಿಗೆ,ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದಿದ್ದಾರೆ.