ಹಾವೇರಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ದೇಶಕ್ಕೆ ಸಂದೇಶ ಕೊಟ್ಟಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿಕೆಯನ್ನ ನೀಡಿದ್ದಾರೆ.
ಹಾವೇರಿ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಬಿಜೆಪಿ ಸರಕಾರದ ಮೇಲಿನ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಹನ್ನೊಂದು ಸ್ಥಾನಗಳಲ್ಲಿ ಗೆಲುವು ಸಿಕ್ಕಿದೆ. ಹಾನಗಲ್ ಉಪಚುನಾವಣೆಯಲ್ಲಿ ಇಡೀ ಸರಕಾರ ಅಲ್ಲಿದ್ರೂ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ರು. ಈ ಮೂರೂ ಚುನಾವಣೆಗಳಿಂದ ಜನರು ಬದಲಾವಣೆ ಬಯಸಿದ್ದಾರೆ.
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲೂ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ನಡೆಸದೆ ಬಿಜೆಪಿ ಪಲಾಯನ ವಾದ ಮಾಡ್ತಿದೆ. 2023ರಲ್ಲಿ ರಾಜ್ಯದ ಜನರು 150ಕ್ಕೂ ಅಧಿಕ ಕಾಂಗ್ರೆಸ್ ಶಾಸಕರನ್ನ ಗೆಲ್ಲಿಸಲಿದ್ದಾರೆ. ಮುಂದೆ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.