Wednesday, December 25, 2024

ನಾಗಮಂಗಲದಲ್ಲಿ ಭೀಕರ ರಸ್ತೆ ಅಪಘಾತ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಭೀಕರ ರಸ್ತೆ ಅಪಘಾತ ನಡೆದಿರುವ ವರದಿಯಾಗಿದೆ. ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಈ ಡಿಕ್ಕಿ ನಡೆದಿದ್ದು ಸ್ಥಳದಲ್ಲೇ ಮೂವರು ಅಸುನೀಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಂಪನಕೊಪ್ಪಲು ಗೇಟ್ ಬಳಿ  ಈ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕೆಂಪನಕೊಪ್ಪಲು ಗೇಟ್ ಬಳಿ ಬೆಳ್ಳೂರು ಕಡೆಗೆ ತೆರಳುತ್ತಿದ್ದ ಬಸ್ ಮೈಸೂರು ಕಡೆಗೆ ಹೊಗುತ್ತಿದ್ದ ಕಾರು ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಮೃತರು ಕೊಡಗು ಜಿಲ್ಲೆ ಸೋಮವಾರಪೇಟೆಯವರು ಎಂದು ವರದಿಯಾಗಿದೆ. ಕಾರಿನಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದು ಅವರ ಪೈಕಿ ಮೂವರು ಸತ್ತಿದ್ದಾರೆ.

ಸುದೀಪ್ (30), ಸುದೀಪ್ ಪತ್ನಿ ಶ್ರೀಜ(26), ಸುದೀಪ್ ಅಕ್ಕನ ಮಗಳು ಹಾಗೂ ಶ್ರೇಯಾ (10) ಮೃತರು. ಕಾರಿನಲ್ಲಿದ್ದ ಮತ್ತೋರ್ವ ಯುವತಿ ಸ್ಥಿತಿ ಗಂಭೀರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತಪಟ್ಟವರ ಶವ ರವಾನೆ ಮಾಡಲಾಗಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ  ಪ್ರಕರಣ ನಡೆದಿದೆ.

RELATED ARTICLES

Related Articles

TRENDING ARTICLES