Monday, December 23, 2024

ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಚಾಲನೆ

ರಾಮನಗರ : ಜಿಲ್ಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರವಾಸ ಹಮ್ಮಿಕೊಂಡಿದ್ದಾರೆ. ರಾಮನಗರ – ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೊಮ್ಮಾಯಿ ಚಾಲನೆ ನೀಡಿದರು.

ಇದೇ ಮೊದಲ ಬಾರಿಗೆ ರೇಷ್ಮೆನಗರಿಗೆ ಸಿಎಂ ಆಗಮಿಸಿದ್ದು, ಸುಮಾರು 300 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರೀನ್ ಸಿಗ್ನಲ್​ ಕೊಟ್ಟಿದ್ದಾರೆ. ಹಲವು ಕಾಮಗಾರಿಗಳ ಶಂಕುಸ್ಥಾಪನೆ ಜೊತೆಗೆ ಉದ್ಘಾಟನೆ ನೆರವೇರಿಸಿದರು. ಮಾಗಡಿ ಒಂದೇ ಕ್ಷೇತ್ರದಲ್ಲಿ 195 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದರು.

 

RELATED ARTICLES

Related Articles

TRENDING ARTICLES