ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗಿದೆ. ಆದರೆ ಯಾರು ಆತಂಕ ಪಡಬೇಡಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆಯೇ ಇದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮಹಾರಾಷ್ಟ್ರದ ಬಳಿಕ ಅತೀ ಹೆಚ್ಚು ಓಮಿಕ್ರಾನ್ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ. ಸದ್ಯ ಈ ಕುರಿತಂತೆ ಸುದ್ದಿಗೋಷ್ಟಿ ನಡೆಸಿದ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದೆ. ಆದರೆ ಯಾರೂ ಭಯಪಡುವ ಅಗತ್ಯವಿಲ್ಲ.
ಪ್ರಸ್ತುತ, ನಗರದಲ್ಲಿ 6,360 ಸಕ್ರಿಯ ಪ್ರಕರಣಗಳಿದ್ದು, 3,100 ಹೊಸ ಪ್ರಕರಣಗಳನ್ನು ವರದಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ನೆನ್ನೆ 246 ಆಸ್ಪತ್ರೆಯಲ್ಲಿ ಬೆಡ್ಗಳು ಭರ್ತಿಯಾಗಿದೆ ಮತ್ತು ಸೋಂಕಿತರೆಲ್ಲರೆಲ್ಲರೂ ಯಾವುದೇ ರೋಗ ಗುಣಲಕ್ಷಣಗಳ ಕಂಡು ಬಂದಿಲ್ಲ. ಕೊರೊನಾ ಎರಡನೇ ಅಲೆಗೆ ಹೋಲಿಸಿದರೆ ಈಗ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ ಎಂದು ಹೇಳಿದ್ದಾರೆ.