Sunday, January 12, 2025

ಐಷಾರಾಮಿ ಕ್ರೂಸ್​ನಲ್ಲಿ ಕೊವಿಡ್ ಪ್ರಯಾಣಿಕರು

ಗೋವಾ: ಗೋವಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬೇರೆ ಬೇರೆ ದೇಶಗಳಿಂದ ಬರುವ ಸುಮಾರು 4000 ದಷ್ಟು ಪ್ರಯಾಣಿಕರನ್ನು ಪ್ರತಿದಿನ ಕೊವಿಡ್ 19 ತಪಾಸಣೆಗೆ ಒಳಪಡಿಸಲಾಗುತ್ತಿದೆ. 2000 ಕ್ಕೂ ಅಧಿಕ ಪ್ರಯಾಣಿಕರು ಇದ್ದ ಮುಂಬೈ-ಗೋವಾ ಐಷಾರಾಮಿ ಕ್ರೂಸ್ ಹಡಗಿನಲ್ಲಿ ಒಬ್ಬ ಪ್ರಯಾಣಿಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ಅದಾದ ಬೆನ್ನಲ್ಲೇ ಉಳಿದ ಪ್ರಯಾಣಿಕರನ್ನೂ ಸಹ ಅಲ್ಲಿಯೇ ಐಸೋಲೇಟ್ ಮಾಡಿ, ಎಲ್ಲರಿಗೂ RT-PCR ಟೆಸ್ಟ್‌ ಮಾಡಲಾಗುತ್ತಿದೆ.

ಅದರ ವರದಿಯೂ ಬರುತ್ತಿದ್ದು, ಸದ್ಯ ಈ ಕಾರ್ಡೆಲಿಯಾ ಕ್ರೂಸಸ್ ಐಷಾರಾಮಿ ಹಡಗಿನಲ್ಲಿ 66 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಬ್ಬರಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡ ನಂತರ, ಯಾರಿಗೂ ಹಡಗಿನಿಂದ ಹೊರ ಹೋಗಲು ಬಿಟ್ಟಿರಲಿಲ್ಲ. ವೈದ್ಯಕೀಯ ತಂಡ ಅಲ್ಲಿಯೇ ಇದ್ದುಕೊಂಡು ಎಲ್ಲರಿಗೂ ಆರ್ಟಿ-ಪಿಸಿಆರ್ ಟೆಸ್ಟ್ ಮಾಡುತ್ತಿದೆ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ. ಇನ್ನು ಹಡಗಿನಲ್ಲಿ ಇದ್ದವರೆಲ್ಲ ಎರಡೂ ಡೋಸ್ ಕೊರೊನಾ ಲಸಿಕೆ ಪಡೆದವರೇ ಆಗಿದ್ದಾರೆ. ಹಾಗಿದ್ದಾಗ್ಯೂ ಕೆಲವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಡಗಿನಲ್ಲಿ ಇದ್ದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ, ಈ ಐಷಾರಾಮಿ ಹಡಗನ್ನು ಗೋವಾದಲ್ಲಿ ನಿಲ್ಲಿಸಲಾಗಿದ್ದು, ಪ್ರತಿಯೊಬ್ಬರಿಗೂ ಕೊವಿಡ್ 19 ಟೆಸ್ಟ್ ಮುಗಿದು, ರಿಪೋರ್ಟ್ ಬಂದ ಬಳಿಕವಷ್ಟೇ ಅಲ್ಲಿಂದ ತೆರಳಲು ಅವಕಾಶ ಮಾಡಿಕೊಡಲಾಗುವುದು.

RELATED ARTICLES

Related Articles

TRENDING ARTICLES