Monday, December 23, 2024

ಇಂದು ಸಂಜೆ ತಜ್ಞರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ರಾಜ್ಯ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ, ಒಮೈಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ತಡೆಗೆ ಬೇಕಾದ ಕ್ರಮಕೈಗೊಳ್ಳಲು ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.

ಕೊರೊನಾ, ಒಮೈಕ್ರಾನ್ ಎರಡನ್ನು ನಾವು ಗಮನಿಸಿದ್ದೇವೆ. ದೇಶದಲ್ಲಿ, ನೆರೆ ರಾಜ್ಯಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.ನಮಗೆ ಕೊರೊನಾ 2ನೇ ಅಲೆ ಅನುಭವವಿದೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮಗಳನ್ನು ಪಾಲಿಸಬೇಕು ಎಂದರು.

RELATED ARTICLES

Related Articles

TRENDING ARTICLES