Wednesday, October 30, 2024

ರೈಲ್ವೇ ಪೊಲೀಸ್​ ಸಸ್ಪೆಂಡ್​​​​

ಕೇರಳ : ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂಬ ಆರೋಪದ ಮೇಲೆ ಪ್ರಯಾಣಿಕರೊಬ್ಬರನ್ನು ಪೊಲೀಸ್ ಬೂಟುಗಾಲಿನಿಂದ ಒದ್ದಿದ್ದಾರೆ. ಪದೇ ಪದೇ ಕಾಲಿನಿಂದ ಒದೆಯುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಕೇರಳದಲ್ಲಿ ಈ ಘಟನೆ ನಡೆದಿದ್ದು ಸುಮಾರು 20 ಸೆಕೆಂಡುಗಳ ವಿಡಿಯೊದಲ್ಲಿ, ಕೋಪಗೊಂಡ ಪೊಲೀಸ್ ನೆಲದ ಮೇಲೆ ಅಸಹಾಯಕನಾಗಿ ಕುಳಿತಿದ್ದ ಪ್ರಯಾಣಿಕನನ್ನು ಬೂಟುಗಾಲಿನಿಂದ ಒದೆಯುತ್ತಿರುವುದು ಕಂಡುಬಂದಿದೆ. ಪೊಲೀಸರ ಈ ಅಮಾನವೀಯ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ತಪ್ಪಿತಸ್ಥ ಪೊಲೀಸ್​​ನ್ನು ಅಮಾನತು ಮಾಡಲಾಗಿದೆ.

ನೆಲದಲ್ಲಿ ಅಸಹಾಯಕವಾಗಿ ಕುಳಿತ ಪ್ರಯಾಣಿನ ಮೇಲೆ ಪೊಲೀಸ್ ದರ್ಪ ತೋರಿಸುವಾಗ ಇನ್ನೊಬ್ಬ ಪೊಲೀಸ್ ಮತ್ತು ರೈಲ್ವೆ ಅಧಿಕಾರಿ ಅಲ್ಲೇ ನಿಂತಿರುವುದು ವಿಡಿಯೋದಲ್ಲಿ ತೋರಿಸಿದ್ದಾರೆ.

RELATED ARTICLES

Related Articles

TRENDING ARTICLES