ಬೆಂಗಳೂರು :ಕರ್ನಾಟಕದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ದಿನೆ ದಿನೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಯಾವುದೇ ರೀತಿಯ ಪಾಸ್ಗಳನ್ನ ವಿತರಿಸೋದಿಲ್ಲ ಸೂಕ್ತ ಕಾರಣವಿಲ್ಲದೆ ಸಂಚರಿಸಿದ್ರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತದೆ,ಬಹುತೇಕ ಮೇಲ್ಸೇತುವೆ ಸಂಚಾರ ಬಂದ್ ಮಾಡಲಾಗುತ್ತದೆ. ಯಾವುದೇ ರೀತಿಯ ಪಾಸ್ಗಳನ್ನ ವಿತರಿಸೋದಿಲ್ಲ , ಆಯಾ ಠಾಣಾಧಿಕಾರಿಗಳೊಂದಿಗೆ ಚರ್ಚಿಸಿ ಚೆಕ್ ಪೋಸ್ಟ್ ನಿರ್ಮಾಣಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ಇದೇ ವಾರದಿಂದಲೇ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ. ಜತೆಗೆ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಇದರ ಜತೆಗೆ ಹಲವು ನಿರ್ಬಂಧಗಳನ್ನೂ ರಾಜ್ಯ ಸರ್ಕಾರ ಜಾರಿಗೆ ತಂದಿದೆ.