Friday, November 1, 2024

ಕೋವಿಡ್​ ರೂಲ್ಸ್​​ ಮರೆತ ಸಚಿವರು

ಶಿವಮೊಗ್ಗ :  ಬಿಜೆಪಿ ಓಬಿಸಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಜನಪ್ರತಿನಿಧಿಗಳೇ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ನೈಟ್ ಮತ್ತು ವೀಕೆಂಡ್ ಕರ್ಫ್ಯೂ, ಹಲವು ನಿಯಮಗಳ ನಡುವೆಯೇ, ಭರ್ಜರಿ ಕಾರ್ಯಕ್ರಮ ನಡೆಯುತ್ತಿದ್ದು, ಸಭೆಯಲ್ಲಿ ಭಾಗವಹಿಸಿದವರು ಮಾಸ್ಕ್​ ಇಲ್ಲದೇ, ಸಾಮಾಜಿಕ ಅಂತರವಿಲ್ಲದೇ ಜನರಿಗೊಂದು ನ್ಯಾಯ, ರಾಜಕಾರಣಿಗಳಿಗೊಂದು ನ್ಯಾಯ ಎಂಬಂತೆ ವರ್ತಿಸಿದ್ದಾರೆ.

ಇನ್ನು, ಬಿಜೆಪಿ ಕಾರ್ಯಕರ್ತರು ಫೋಕ್ ಲೈನ್ ಮೂಲಕ ಜನಪ್ರತಿನಿಧಿಗಳಿಗೆ ಪುಷ್ಪಾರ್ಚನೆ ಸ್ವಾಗತ ಕೋರಿದ್ದಾರೆ. ಶಿವಮೊಗ್ಗದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಓಬಿಸಿ ಕಾರ್ಯಕಾರಿಣಿ ನಡೆಯುತ್ತಿದ್ದು, ಸಭೆಗೂ ಮುನ್ನ ಮೆರವಣಿಗೆ ನಡೆದಿದೆ.

ಮೆರವಣಿಗೆಯಲ್ಲಿ, ಗೃಹಮಂತ್ರಿ ಆರಗ ಜ್ಞಾನೇಂದ್ರ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಓಬಿಸಿ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಯಶ್​ಪಾಲ್​ ಸುವರ್ಣ ಭಾಗಿಯಾಗಿದ್ದಾರೆ.

RELATED ARTICLES

Related Articles

TRENDING ARTICLES