Sunday, December 22, 2024

ವಿದ್ಯಾರ್ಥಿಗಳಿಗೆ ನೆರವಾದ ನಟ ಸೋನು ಸೂದ್

ಮೊಗಾ : ನಟ ಸೋನು ಸೂದ್ ಇತ್ತೀಚಿಗೆ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದಕ್ಕಿಂತ ಸಾಮಾಜಿಕ ಕೆಲಸಗಳಲ್ಲೇ ನಿರತರಾಗಿದ್ದಾರೆ. ಅವರು ಮಾಡುತ್ತಿರುವ ಸಾಮಾಜಿಕ ಕೆಲಸಗಳು ಒಂದೆರಡಲ್ಲ. ಕೋವಿಡ್ ಮೊದಲನೇ ಅಲೆ ಕಾಣಿಸಿಕೊಂಡಾಗ ಸೋನು ಸೂದ್​ ಅವರು  ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡವರು ಇಂದಿಗೂ ಆ ಕಾರ್ಯವನ್ನು ಮುಂದುವರೆಸುತ್ತಾ ಬಂದಿದ್ದಾರೆ. ಅಲ್ಲದೇ ಒಂದಾದ ಮೇಲೆ ಒಂದರಂತೆ ಜವಾಬ್ದಾರಿಗಳನ್ನು ತೆಗೆದುಕೊಳ್ಳುತ್ತಲೇ ಹೋದರು.

ಕೇವಲ ಕೊವಿಡ್​​ಗೆ ಮಾತ್ರ ಸೀಮಿತವಾಗದೆ, ಹಲವು ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡರು ಸೋನು. ಈಗ ಅವರು ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಈ ಬಾರಿ ತಮ್ಮ ಹುಟ್ಟೂರಿನ ಮೇಲೆ ಪ್ರೀತಿ ತೋರಿಸಿದ್ದಾರೆ.ಕೊವಿಡ್ ಪ್ರಕರಣ ಮತ್ತೆ ಹೆಚ್ಚುತ್ತಿದೆ. ಶೀಘ್ರವೇ ಮೂರನೆ ಅಲೆ ಬರುವ ಸೂಚನೆ ಸಿಕ್ಕಿದೆ. ಇದು ಸಾಕಷ್ಟು ಜನರಲ್ಲಿ ಆತಂಕ ಮೂಡಿಸಿದೆ. ಈ ಸಂದರ್ಭದಲ್ಲಿ ಸೋನು ಸೂದ್ ತಮ್ಮ ಕಾರ್ಯವನ್ನು ಹೆಚ್ಚಿಸಿದ್ದಾರೆ. ಈ ಮಧ್ಯೆ, ಮೊಗಾ ಕಿ ಧಿ (ಮೊಗಾದ ಮಗಳು) ಹೆಸರಿನ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ.

ಸಹೋದರಿ ಮಾಳವಿಕಾ ಸೂದ್ ಜತೆ ಸೇರಿ ಸೋನು ಸೂದ್ ತಮ್ಮ ಹುಟ್ಟೂರಾದ ಮೊಗಾದಲ್ಲಿರುವ 1,000 ವಿದ್ಯಾರ್ಥಿನಿಯರು ಹಾಗೂ ಸಾಮಾಜಿಕ ಕಾರ್ಯಕರ್ತೆಯರಿಗೆ ಸೈಕಲ್​​ಗಳನ್ನು ನೀಡಿದ್ದಾರೆ. ಇದರಿಂದ ಸುಮಾರು 40-45 ಗ್ರಾಮದ ವಿದ್ಯಾರ್ಥಿನಿಯರಿಗೆ ಸಹಾಯ ಆಗಿದೆ. ಸೂದ್ ಚಾರಿಟಿ ಫೌಂಡೇಶನ್‌ನೊಂದಿಗೆ ಮಾಳವಿಕಾ ಸೂದ್ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.

RELATED ARTICLES

Related Articles

TRENDING ARTICLES