Monday, January 27, 2025

ಐಸಿಸಿ ಬೌಲರ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಬೌಲರ್​ಗಳು

ನವದೆಹಲಿ: ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ನೂತನ ಟೆಸ್ಟ್ ಬೌಲರುಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಬೌಲರುಗಳು ಸ್ಥಾನ ಪಡೆದಿರುವುದು ವಿಶೇಷ. ಹೌದು, ದಕ್ಷಿಣ ಆಫ್ರಿಕಾ ವಿರುದ್ದದ ಸೆಂಚುರಿಯನ್ ಟೆಸ್ಟ್​ನಲ್ಲಿ ಭರ್ಜರಿ ಬೌಲಿಂಗ್ ಮಾಡಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಇದೀಗ ಟಾಪ್-10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಸೌತ್ ಆಫ್ರಿಕಾ ವಿರುದ್ದ ಮೊದಲ ಟೆಸ್ಟ್​ನಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದ ಬುಮ್ರಾ ಮೂರು ಸ್ಥಾನ ಮೇಲೇರಿ 9ನೇ ಸ್ಥಾನ ಅಲಂಕರಿಸಿದ್ದಾರೆ. ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನೂತನ ರ‍್ಯಾಂಕಿಂಗ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಈ ಇಬ್ಬರೂ ಭಾರತೀಯ ಬೌಲರುಗಳು ದಕ್ಷಿಣ ಆಫ್ರಿಕ ಟೆಸ್ಟ್​ ಪಂದ್ಯದಲ್ಲಿ ಒಳ್ಳೆಯ ಪ್ರದರ್ಶನ ನೀಡುತ್ತಿದ್ದಾರೆ.

RELATED ARTICLES

Related Articles

TRENDING ARTICLES