Wednesday, January 22, 2025

ಅಂತರಾಷ್ಟ್ರೀಯ ಕ್ರಿಕೆಟ್​ಗೆ ಎರಡೇ ವರ್ಷದಲ್ಲಿ ಭಾನುಕ ವಿದಾಯ : ಕಾರಣವೇನು?

ಶ್ರೀಲಂಕಾ ಕ್ರಿಕೆಟಿಗ ಭಾನುಕ ರಾಜಪಕ್ಸ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ನಿವೃತ್ತಿ ಘೋಷಣೆ ಮಾಡಿದ್ದಾರೆ. ಭಾನುಕ ರಾಜಪಕ್ಸ 2019ರಲ್ಲಿ ಅಂತಾರಾಷ್ಟ್ರೀಯ ಟಿ20ಗೆ ಪಾದಾರ್ಪಣೆ ಮಾಡಿದ್ದು, ಇನ್ನು ಇದರ ಜೊತೆಗೆ 6 ತಿಂಗಳ ಹಿಂದಷ್ಟೇ ಏಕದಿನ ಕ್ರಿಕೆಟ್‌ಗೂ ಪಾದಾರ್ಪಣೆ ಮಾಡಿದ್ರು. ಇತ್ತೀಚೆಗೆ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲೂ ತಂಡದಲ್ಲಿ ಸ್ಥಾನ ಗಳಿಸಿದ್ದರು. ಇದೀಗ ದಿಢೀರ್ ಅಂತ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ಗುಡ್‌ಬೈ ಹೇಳಿರುವುದು ಅನೇಕ ಅಚ್ಚರಿಗಳಿಗೆ ಎಡೆಮಾಡಿಕೊಟ್ಟಿದೆ.

ಇನ್ನು, ನಿವೃತ್ತಿಗೆ ಕಾರಣ ತಿಳಿಸಿರುವ ಭಾನುಕ ಅವರು ತಮ್ಮ ಕೌಟುಂಬಿಕ ಸಮಸ್ಯೆಯ ಕಾರಣವನ್ನು ನೀಡಿದ್ದಾರೆ. ಆಟಗಾರನಾಗಿ ಹಾಗೂ ಪತಿಯಾಗಿ ಸಾಕಷ್ಟು ಎಚ್ಚರಿಕೆಯಿಂದಲೇ ನಾನು ಈಗ ನಿವೃತ್ತಿಯ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ.

ನನ್ನ ಕುಟುಂಬವನ್ನು ಗಮನದಲ್ಲಿಟ್ಟುಕೊಂಡು ಕ್ರಿಕೆಟ್‌ಗೆ ಗುಡ್‌ಬೈ ಹೇಳುತ್ತಿರುವುದಾಗಿ ಭಾನುಕ ರಾಜಪಕ್ಸ ಅವರು ಹೇಳಿದ್ದಾರೆ. ಮತ್ತೊಂದು ವಿಶೇಷವೆಂದರೇ 2010ರ ಅಂಡರ್‌19 ವಿಶ್ವಕಪ್ ಟೂರ್ನಿಯಲ್ಲಿ ಭಾನುಕ ಲಂಕಾ ತಂಡದ ಪರ ಗರಿಷ್ಠ ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಶ್ರೀಲಂಕಾ ಪರ 5 ಏಕದಿನ, 18 ಟಿ20 ಪಂದ್ಯಗಳನ್ನು ಆಡಿರುವ ಅವರು ಒಟ್ಟು 409 ರನ್‌ಕಲೆ ಹಾಕಿದ್ದಾರೆ.

RELATED ARTICLES

Related Articles

TRENDING ARTICLES