ದಕ್ಷಿಣ ಆಫ್ರಿಕ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಈಗಾಗಲೇ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದೆ. ಸೆಂಚೂರಿಯನ್ನಲ್ಲಿ ಆಡಿದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತ ಜಯಗಳಿಸಿದರೆ, ಜೊಹಾನ್ಸ್ಬರ್ಗ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ದಕ್ಷಿಣ ಆಫ್ರಿಕಾ ಜಯಿಸಿ ಸರಣಿಯನ್ನು ಜೀವಂತವಾಗಿರಿಸಿತ್ತು. ಹಾಗಾಗಿ ಎರಡೂ ತಂಡಗಳು ಒಂದೊಂದು ಪಂದ್ಯಗಳನ್ನು ಗೆದ್ದು ಸರಣಿ ಸಮವಾಗಿರುವುದರಿಂದ, ಮೂರನೆಯ ಮತ್ತು ಕೊನೆಯ ಟೆಸ್ಟ್ ಪಂದ್ಯ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಎರಡನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಬೆನ್ನುನೋವಿನ ಕಾರಣದಿಂದಾಗಿ ತಂಡದಿಂದ ಹೊರಗುಳಿದಿದ್ದರಿಂದ ತಂಡವನ್ನು ಕರ್ನಾಟಕದ ಪ್ರತಿಭಾವಂತ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ಕ್ಯಾಪ್ಟನ್ ಆಗಿ ಮುನ್ನಡೆಸಿದ್ದರು. ಇದೀಗ ಕೇಪ್ಟೌನ್ನಲ್ಲಿ ನಡೆಯಲಿರುವ ಮೂರನೆಯ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತ ಶತಾಯಗತಾಯ ಪ್ರಯತ್ನಿಸಲಿದೆ. ಏಕೆಂದರೆ ಇದುವರೆಗೂ ಭಾರತ ದಕ್ಷಿಣ ಆಫ್ರಿಕಾದ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಆದ್ದರಿಂದ ಭಾರತ ಕೇಪ್ಟೌನ್ನಲ್ಲಿ 3ನೇ ಟೇಸ್ಟ್ ಗೆದ್ದು ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಆದರೆ ಸಮಬಲವಿರುವ ಎರಡೂ ತಂಡಗಳು 3ನೇ ಪಂದ್ಯವನ್ನು ಗೆಲ್ಲಲು ತಮ್ಮ ಶಕ್ತಿಮೀರಿ ಪ್ರಯತ್ನಿಸುವುದರಿಂದ, ಎರಡೂ ತಂಡಗಳು ತಮ್ಮ ಅತ್ಯುತ್ತಮ ತಂಡವನ್ನು ಇಳಿಸುವುದು ಶತಸಿದ್ಧ. ಹಾಗಾಗಿ ಟೀಮ್ ಇಂಡಿಯಾದ ಸಂಭಾವ್ಯ ತಂಡದಲ್ಲಿ ಯಾರು ಯಾರಿರಬಹುದು ಎಂಬುದನ್ನು ನೋಡೋಣ.
ಸಂಭಾವ್ಯ ಭಾರತ ತಂಡ: ಕೆ.ಎಲ್.ರಾಹುಲ್, ಮಯಾಂಕ್ ಅಗರವಾಲ್, ಚೇತೇಶ್ವರ್ ಪೂಜಾರ್, ವಿರಾಟ್ ಕೋಹ್ಲಿ (ಕ್ಯಾಪ್ಟನ್), ಅಜಿಂಕ್ಯಾ ರಹಾನೆ, ರಿಶಭ್ ಪಂತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಆರ್.ಅಶ್ವಿನ್, ,ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ ಮತ್ತು ಇಶಾಂತ್ ಶರ್ಮ.