ರಾಜ್ಯ : ಕೋವಿಡ್ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ಹೋರಾಟ ಮಾಡಬೇಡಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಗೆ ನಮ್ಮ ವಿರೋಧವಿಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ಸಮಯ ಸಂದರ್ಭ ನೋಡಿಕೊಂಡು ಹೋರಾಟ ಮಾಡಬೇಕಾಗುತ್ತದೆ. 25 ಸಾವಿರ ಜನರನ್ನು ಕರೆದು ಹೋರಾಟ ಮಾಡುತ್ತೇವೆ ಅಂತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ. ಈ ಬಗ್ಗೆ ಕಾಂಗ್ರೆಸ್ ಸ್ವಲ್ಪ ಆಲೋಚನೆ ಮಾಡಬೇಕು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಯಾವುದೇ ಕೆಲಸ ಮಾಡಲಿಲ್ಲ. ಅವರು ಯೋಜನೆ ಅನುಷ್ಠಾನ ತರುವುದಕ್ಕೆ ಯಾವ ಕೆಲಸ ಮಾಡಲಿಲ್ಲ. ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ಮಾಡಿದ್ದಾರೆ. ಈಗ ಅಧಿಕಾರದಲ್ಲಿಲ್ಲ ಈಗ ಹೋರಾಟ ಮಾಡುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ವೋಟ್ ಬ್ಯಾಂಕ್‍ಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.