Wednesday, January 22, 2025

ಜೈಶ್ರೀರಾಮ್ ಘೋಷಣೆಯೊಂದಿಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ನುಗ್ಗಿದ ಆಗಂತುಕ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರಿದ್ದ ವೇದಿಕೆಗೆ ಜೈ ಶ್ರೀರಾಮ್ ಎಂಬ ಘೋಷಣೆ ಕೂಗುತ್ತ ವ್ಯಕ್ತಿಯೊಬ್ಬ ಚಾಕು ಹಿಡಿದು ನುಗ್ಗಿದ ಆತಂಕಕಾರಿ ಘಟನೆ ನಡೆದದೆ. ಕೂಡಲೇ ಆ ವ್ಯಕ್ತಿಯನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹರೀಶ್ ರಾವತ್ ಅಲ್ಲಿಂದ ಇನ್ನೊಂದು ಕಾರ್ಯಕ್ರಮಕ್ಕೆ ಹೋಗುವ ತರಾತುರಿಯಲ್ಲಿದ್ದುದರಿಂದ ಈ ಘಟನೆಯನ್ನು ನಿರ್ಲಕ್ಷಿಸಿದರು ಎನ್ನಲಾಗಿದೆ. ಪೊಲೀಸರು ಬಂಧಿತ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಿದ್ದಾರೆ. ಅವನ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯನ್ವಯ ಪ್ರಕರಣವನ್ನು ದಾಖಲು ಮಾಡಲಾಗಿದೆ.

RELATED ARTICLES

Related Articles

TRENDING ARTICLES