ದೇಶ : ಭಾರತದಲ್ಲಿ ನಾಳೆಯಿಂದ ಮೂರನೇ ಡೋಸ್ ಲಸಿಕೆ ಅಭಿಯಾನ ನಡೆಯಲಿದೆ. ಸದ್ಯ ಕೊವಿಡ್ -19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರು ಮತ್ತು 60 ವರ್ಷ ಮೇಲ್ಪಟ್ಟು ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೊವಿಡ್ 19 ಲಸಿಕೆ ಬೂಸ್ಟರ್ ಡೋಸ್ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
18 ವರ್ಷ ಮೇಲ್ಪಟ್ಟವರಿಗೆ ಕಳೆದ ವರ್ಷ ಜನವರಿಯಿಂದಲೇ ಕೊರೋನಾ ಲಸಿಕೆ ನೀಡಲಾಗುತ್ತಿತ್ತು. ಒಟ್ಟಾರೆ ಸದ್ಯ ದೇಶದಲ್ಲಿ 150 ಕೋಟಿಗೂ ಅಧಿಕ ಡೋಸ್ ನೀಡಲಾಗಿದ್ದು, ಜನವರಿ 3ರಿಂದ 15-18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಆರಂಭವಾದ ಒಂದೇ ವಾರದಲ್ಲಿ ಈ ವಯಸ್ಸಿನ 2 ಕೋಟಿಗೂ ಹೆಚ್ಚಿನ ಜನರು ಕೊರೊನಾ ಲಸಿಕೆ ಪಡೆದಿದ್ದಾರೆ.