Monday, December 23, 2024

ಕೊರೋನಾ ಆರ್ಭಟ ಮತ್ತೆ ಶುರು..!

ದೇಶ : ಭಾರತದಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇತ್ತೀಚಿನ ಬುಲೆಟಿನ್ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1ಲಕ್ಷದ 59 ಸಾವಿರದ 632 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.

ಆತಂಕದ ಸಂಗತಿಯೆಂದರೆ ಕೊವಿಡ್ ಪಾಸಿಟಿವಿಟಿ ರೇಟ್ ಶೇ. 10.21ರಷ್ಟಿದೆ. ಭಾರತದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 5ಲಕ್ಷದ 90 ಸಾವಿರದ 611ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ 327 ಜನರು ಮೃತಪಟ್ಟಿದ್ದು, ದೇಶದಲ್ಲಿ ಇದುವರೆಗೆ ಸೋಂಕಿನಿಂದ 4ಲಕ್ಷದ 83 ಸಾವಿರದ 790 ಜನರು ನಿಧನರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 40,863 ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3ಕೋಟಿ 44ಲಕ್ಷದ 53ಸಾವಿರದ 603ಕ್ಕೆ ತಲುಪಿದೆ.

RELATED ARTICLES

Related Articles

TRENDING ARTICLES