Monday, December 23, 2024

ಬಾವಿಗೆ ಬಿದ್ದು ಮಕ್ಕಳು ಸಾವು

ಕಲಬುರಗಿ  : ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ದುರ್ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಗೊಬ್ಬರುವಾಡಿ ಗ್ರಾಮದಲ್ಲಿ ನಡೆದಿದೆ.

ಬಾವಿಗೆ ಬಿದ್ದಿದ್ದ ಪ್ರಣತಿ ಹಾಗೂ ಶಿವಕುಮಾರ್ ಸಾವನ್ನಪ್ಪಿದ್ದಾರೆ. ಇನ್ನು, ತಂದೆ ಶರಣಪ್ಪ ಎಂಬವರನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಅಸ್ವಸ್ಥ ಶರಣಪ್ಪನನ್ನ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಯಾಕೆ ಬಾವಿಗೆ ಬಿದ್ದಿದ್ದರು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಲದಬಾಧೆ ತಾಳಲಾರದೆ ಮಕ್ಕಳ ಜೊತೆ ಬಾವಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED ARTICLES

Related Articles

TRENDING ARTICLES