Sunday, December 22, 2024

ಕಾಂಗ್ರೆಸ್​​ನದ್ದು ಚುನಾವಣಾ ಯಾತ್ರೆ

ಹುಬ್ಬಳ್ಳಿ : ಕೇವಲ ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಪಕ್ಷ ಮೇಕದಾಟು ಪಾದಯಾತ್ರೆ ಕೈಗೊಂಡಿದ್ದು, ಇಂತಹ ಕ್ಷುಲ್ಲಕ ರಾಜಕಾರಣ ಕೈ ಬಿಡುವಂತೆ ಜವಳಿ, ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನದ್ದು ಮುಂದಿನ ಚುನಾವಣೆಗೆ ಮಾತ್ರ ಪಾದಯಾತ್ರೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಮಹದಾಯಿ ಸಮಯದಲ್ಲೂ ಕಾಂಗ್ರೆಸ್​​ನಿಂದ ಇದೇ ಧೋರಣೆ ವ್ಯಕ್ತವಾಗುತ್ತಿದೆ. ಗೋವಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಂದು ಹನಿ ನೀರು ಕರ್ನಾಟಕಕ್ಕೆ ಬಿಡುವುದಿಲ್ಲ ಅಂತ ಹೇಳಿದ್ರು. ಮಹದಾಯಿ ಬಗ್ಗೆ ಕಾಂಗ್ರೆಸ್​​ಗೆ ಸ್ಪಷ್ಟ ನಿಲುವಿಲ್ಲ ಎಂದಿದ್ದಾರೆ.

RELATED ARTICLES

Related Articles

TRENDING ARTICLES