Wednesday, January 22, 2025

ಸಿದ್ದುಗೆ ಜ್ವರ, ನನ​​ಗೆ ಟೆನ್ಷನ್

ರಾಜ್ಯ : ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದೆ, ನನಗೆ ಕಳವಳ ಆಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುಮಾರು ನಾಲ್ಕು ಕಿ.ಮೀ. ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದರು. ಈ ವಿಚಾರವಾಗಿ ಗೋವಿಂದ ಕಾರಜೋಳ ಟ್ವಿಟ್​ ಮಾಡಿದ್ದಾರೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದೆ. ನನಗೆ ಕಳವಳ ಆಗಿದೆ. ಸಿದ್ದರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ. ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು ಎಂದು ಕಾರಜೋಳ ಹೇಳಿದರು. ಅಲ್ಲದೇ, ಕಾಂಗ್ರೆಸ್ಸಿಗರೇ ನಿಮ್ಮದು ಬೆಂಗಳೂರಿಗೆ ನೀರು ಕೊಡುವ ಯಾತ್ರೆಯೋ ಅಥವಾ ಬೆಂಗಳೂರಿಗರಿಗೆ ಕೊರೊನಾ ಹಬ್ಬಿಸುವ ಜಾತ್ರೆಯೋ? ಎಂದು ಪ್ರಶ್ನಿಸಿದ್ದಾರೆ.

RELATED ARTICLES

Related Articles

TRENDING ARTICLES