Monday, December 23, 2024

ಕಾಂಗ್ರೆಸ್​​ ಪಾದಯಾತ್ರೆಗೆ ಜೈ ಎಂದ ಜೆಡಿಎಸ್​ ಶಾಸಕ ಜಿ.ಟಿ ದೇವೇಗೌಡ

ಮೈಸೂರು: ಪಕ್ಷಾತೀತವಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಅಂತ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ಎಲ್ಲರಿಗೂ ಆಹ್ವಾನ ನೀಡಿ ಪಾದಯಾತ್ರೆ ಮಾಡುತ್ತಿದ್ದಾರೆ. ತ್ವರಿತವಾಗಿ ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಅವಶ್ಯಕ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಕಾಂಗ್ರಸ್​ ಪಾದಯಾತ್ರೆ ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಕೇವಲ ಕಾಂಗ್ರೆಸ್​ನವರಿಗೆ ಮಾತ್ರವಲ್ಲ, ಬಿಜೆಪಿ, ಜೆಡಿಎಸ್ ಸೇರಿ ಎಲ್ಲರಿಗೂ ಬೇಕು. ರಾಜ್ಯಕ್ಕೆ ಕುಡಿಯುವ ನೀರು ಅತ್ಯಾವಶ್ಯಕ. ಇದರಲ್ಲಿ ರಾಜಕೀಯ ಮಾಡೋಕೆ ಇನ್ನೂ ಚುನಾವಣೆ ಒಂದೂವರೆ ವರ್ಷ ಇದೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕರು ಒಟ್ಟಾಗಿ ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಾ ಪಾದಯಾತ್ರೆ ತಡೆದಿಲ್ಲ. ತ್ವರಿತವಾಗಿ ಯೋಜನೆ ಜಾರಿ ಆಗ್ಬೇಕು ಅನ್ನೋದು ನಮ್ಮ ಆಶಯ ಎಂದರು.

ಸದ್ಯ ಜಿಲ್ಲೆಯಲ್ಲಿ ಕೊರೊನಾ ಹೆಚ್ವಳವಾಗುತ್ತಿದೆ. ಈಗಾಗಲೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಮತ್ತಷ್ಟು ಸಿದ್ಧತೆ ಮಾಡಿಕೊಳ್ಳುತ್ತೇವೆ. ಕಳೆದ ಬಾರಿಯಂತೆ ಕೋವಿಡ್ ಸೆಂಟರ್​ಗಳ ನಿರ್ಮಾಣ ಮಾಡಲಾಗುತ್ತೆ. ಬೆಡ್​ಗಳ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಅಲ್ಲದೇ ಇಂದಿನಿಂದ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಮರ್ಥವಾಗಿ ಕೋವಿಡ್ ನಿರ್ವಹಿಸಲಿದ್ದೇವೆ ಎಂದು ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿದರು.

RELATED ARTICLES

Related Articles

TRENDING ARTICLES