Monday, December 23, 2024

ಶಾಸಕ ಯಶವಂತರಾಯಗೌಡ ಆಕ್ರೋಶ

ರಾಜ್ಯ: ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗಳ ಪಾತ್ರ ಏನು ಇಲ್ಲ ಎಂದು  ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದ್ದಾರೆ. ಪ್ರಕರಣ ಕುರಿತಂತೆ ಯಶವಂತರಾಯಗೌಡ ಪಾಟೀಲ್ ಅವರು ಇಂದು ಬೆಳಗ್ಗೆ ಸುದ್ದಿಗೋಷ್ಟಿ ನಡೆಸಿದರು.

ರಾಜಕಾರಣ ಮಾಡುವವರು ನೇರವಾಗಿ ನನ್ನ ವಿರುದ್ಧ ರಾಜಕಾರಣ ಮಾಡಲಿ. ಮನೆಯವರು, ಮಕ್ಕಳನ್ನು ಇದರಲ್ಲಿ ಯಾಕೆ ತರುತ್ತಾರೆ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಾನು ಉತ್ತಮ ಸ್ನೇಹಿತರು. ನಾವಿಬ್ಬರೂ ಸಿಎಂರನ್ನು ಭೇಟಿ ಮಾಡಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ಏನೋ ತಪ್ಪಾಗಿ ಹೀಗೆಲ್ಲಾ ಆಗಿದೆ. ಪ್ರಕರಣದ ಹಿಂದೆ ಇರುವವರನ್ನು ಬಯಲಿಗೆಳೆಯಲಿ. ನನ್ನ ಮಗಳ ಹೆಸರು ಯಾಕೆ ತಂದಿದ್ದಾರೆ ಅಂತ ಗೊತ್ತಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದರು.

RELATED ARTICLES

Related Articles

TRENDING ARTICLES