Monday, December 23, 2024

ಚಿನ್ನ ಚೋರ ಅಂದರ್​​​​​​​​​

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಕಾರ್ಯಾಚರಣೆ ಮಾಡಿ ಚಿನ್ನಾಭರಣ ಎಗರಿಸಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಯಾಟಲೈಟ್ ಬಳಿ ಬಸ್ ಇಳಿಯುವಾಗ ಚಿನ್ನಾಭರಣವನ್ನ ಆರೋಪಿಗಳು ತಮ್ಮ ಕರಾಮತ್ತು ತೋರಿಸಿ ಎಗರಿಸಿದ್ದರು. ಈ ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಸುತ್ತಮುತ್ತಲಿನ ಸಿಸಿಟಿವಿ ಫುಟೇಜ್​ಗಳನ್ನು ಆಧರಿಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಆನಂದ್ ಗಿರಿ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಇನ್ನು ವಿಚಾರಣೆ ವೇಳೆ ಹಲವು ಮನೆಗಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಬಂಧಿತನಿಂದ 16 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

RELATED ARTICLES

Related Articles

TRENDING ARTICLES