ಹಾಸನ : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿರುವುದರಿಂದ ಸರ್ಕಾರ ಹೇರಿರುವ ಕರ್ಫ್ಯೂ ನಡುವೆಯೂ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಜನಕ್ಕೆ ಕಾಂಗ್ರೆಸ್ ಮೇಲೆ ಪ್ರೀತಿ ಇದ್ರೆ, ಸ್ವಯಂಪ್ರೇರಿತವಾಗಿ ಪಾದಯಾತ್ರೆಗೆ ಬರುತ್ತಿದ್ದರು. ಪಾದಯಾತ್ರೆಗೆ ಬಂದವರಿಗೆ 300 ರೂ. ಪೆಟ್ರೋಲ್ ಟೋಕನ್ ಏಕೆ ಕೊಡುತ್ತಿದ್ದಾರೆ. ಎಲ್ಲರಿಗೂ ಪೊಂಗಲ್, ಪಲಾವ್ ಏಕೆ ಮಾಡಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಜೆಡಿಎಸ್ ಅಂದರೆ ಭಯವಿದೆ, ಜೆಡಿಎಸ್ ಮುಗಿಸಲು ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ಅದಕ್ಕಾಗಿ ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಮ್ಮಿಶ್ರ ಸರ್ಕಾರದಲ್ಲಿ ಈಗ ಮೆರವಣಿಗೆ ಹೊರಟಿರುವವರೇ ಜಲಸಂಪೂನ್ಮೂಲ ಸಚಿವರಾಗಿದ್ದರು. ಅದರಲ್ಲಿ ರುಚಿ ಕಂಡು ಆ ಹುದ್ದೆಯನ್ನು ಅವರೇ ಇಟ್ಟುಕೊಂಡಿದ್ದರು ಎಂದು ಡಿಕೆಶಿಗೆ ಮಾತಿನಲ್ಲೇ ತಿವಿದರು.