Monday, December 23, 2024

ಆರೋಗ್ಯ ಸಚಿವ ಕೆ ಸುಧಾಕರ್ ​​ಹೋಮ್​ ಐಸೋಲೇಶನ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊವಿಡ್ ದೃಢವಾಗಿದ್ದು, ಅವರ ಜೊತೆಗೆ ನಿರಂತರವಾಗಿ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಆರೋಗ್ಯ ಸಚಿವ ಡಾ. ಸುಧಾಕರ್ ಸಹ ಪ್ರಾಥಮಿಕ ಸಂಪರ್ಕಕ್ಕೆ ಒಳಪಟ್ಟಿದ್ದರು.

ಈ ಕಾರಣದಿಂದ ಅವರೂ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದರು. ಆದರೆ, ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಿತನಾದ್ದರಿಂದ ನಾನು ಎರಡು ದಿನಗಳ ಕಾಲ ಸ್ವಯಂ ಪ್ರೇರಿತನಾಗಿ ಐಸೋಲೇಶನ್​ಗೆ ಒಳಪಡುತ್ತಿದ್ದೇನೆ.

2 ದಿನಗಳ ನಂತರ RT-PCR ಪರೀಕ್ಷೆಗೆ ಒಳಪಡಲಿದ್ದೇನೆ’. ‘ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲದಿದ್ದರೂ, ಇತರರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನೈತಿಕ ಜವಾಬ್ದಾರಿ ಹೊತ್ತು ಮುಂದಿನ ಎರಡು ದಿನಗಳ ಕಾಲ ನಾನು ಪ್ರತ್ಯೇಕವಾಗಿರಲಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.

RELATED ARTICLES

Related Articles

TRENDING ARTICLES