Wednesday, January 22, 2025

‘ನಾನು ಫಿಟ್​​ & ಫೈನ್​ ಇದ್ದೇನೆ’ – ಕೊಹ್ಲಿ

ಕೇಪ್​ಟೌನ್: ನಾನು ಸಂಪೂರ್ಣ ಫಿಟ್ ಆಗಿದ್ದೇನೆ, ಅದನ್ನು ಸಾಬೀತುಪಡಿಸುವ ಅಗತ್ಯವಿಲ್ಲ. ಹೊರಗಿನವರು ಏನು ಹೇಳುತ್ತಾರೆ ಅನ್ನೋದು ನನಗೆ ಮುಖ್ಯವಲ್ಲ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ಟೆಸ್ಟ್ ಸರಣಿ ಹಾಗೂ ತಮ್ಮ ಬ್ಯಾಟಿಂಗ್ ಫಾರ್ಮ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

“ನನ್ನ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳು ಏಳುತ್ತಿರುವುದು ಇದೇನು ಮೊದಲಲ್ಲ. 2014ರ ಇಂಗ್ಲೆಂಡ್ ಪ್ರವಾಸದ ವೇಳೆಯೂ ಇದು ನಡೆದಿತ್ತು. ಹೊರಗಿನವರು ಏನು ಹೇಳುತ್ತಾರೆ ಅನ್ನೋದು ನನಗೆ ಮುಖ್ಯವಲ್ಲ. ನಾನು ಯಾರಿಗೂ ಏನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ. ನಾವು ತುಂಬಾ ಕ್ರಿಕೆಟ್ ಆಡುತ್ತಿದ್ದೇವೆ. ಎಲ್ಲಾ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅತ್ಯುತ್ತಮ ತಂಡವನ್ನು ಕಣಕ್ಕಿಳಿಸಲು ಬಯಸುತ್ತೇವೆ. ಹೀಗಾಗಿ ಆಟಗಾರರು ಗಾಯಗೊಳ್ಳುವುದು ಸಾಮಾನ್ಯ” ಎಂದು ಅವರು ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

RELATED ARTICLES

Related Articles

TRENDING ARTICLES