Monday, January 6, 2025

ಬಿಜೆಪಿಯ ಜೆ.ಪಿ.ನಡ್ಡಾಗೆ ಕೋವಿಡ್

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೊವಿಡ್-19 ಸೋಂಕಿನ ಆರಂಭಿಕ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ಅವರನ್ನು ಸೋಂಕಿನ ಪರೀಕ್ಷೆಗೊಳಪಡಿಸಲಾಯಿತು. ಈ ವೇಳೆ ಅವರಲ್ಲಿ ಸೋಂಕು ತಗುಲಿರುವುದು ಖಾತ್ರಿಯಾಗಿದೆ.

“ನಾನು ಆರೋಗ್ಯವಾಗಿದ್ದೇನೆ ಮತ್ತು ವೈದ್ಯರ ಸಲಹೆಯ ಮೇರೆಗೆ ನಾನು ಕ್ವಾರಂಟೀನ್​​ ಆಗಿದ್ದೇನೆ,” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಕೊರೋನಾ ವೈರಸ್ ಮೂರನೇ ಅಲೆಯಲ್ಲಿ ಜೆಪಿ ನಡ್ಡಾ ಅಲ್ಲದೇ ಹಲವಾರು ನಾಯಕರಿಗೆ ಸೋಂಕು ತಗುಲಿದೆ. ಕರ್ನಾಟಕದ ಬಿಜೆಪಿ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿಯವರಿಗೂ ಕೊರೋನ ಬಂದಿರುವುದನ್ನು ಸ್ಮರಿಸಬಹುದು.

RELATED ARTICLES

Related Articles

TRENDING ARTICLES