Monday, December 23, 2024

ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೋನಾ ದೃಢ

ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಕೊರೊನಾದಿಂದ ಅವರ ಆರೋಗ್ಯ ಭಾರೀ ಹದಗೆಟ್ಟ ಹಿನ್ನೆಲೆಯಲ್ಲಿ 92 ವರ್ಷದ ಲತಾ ಮಂಗೇಶ್ವರ್ ಅವರನ್ನು ಹೀಗಾಗಿ ಚಿಕಿತ್ಸೆಗಾಗಿ ಅವರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈಗಾಗಲೇ ಅನೇಕ ಜನಪ್ರತಿನಿಧಿಗಳು, ನಟ-ನಟಿಯರಿಗೆ ಕೊರೋನಾ ಸೋಂಕು ತಗುಲಿದೆ. ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಇಂದು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1929ರ ಸೆಪ್ಟೆಂಬರ್ 28ರಂದು ಜನಿಸಿದ ಲತಾ ಮಂಗೇಶ್ಕರ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಫ್ರಾನ್ಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ, ಆಫೀಸರ್ ಆಫ್ ದಿ ಲೀಜನ್ ಆಫ್ ಹಾನರ್, ಜೊತೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಅವರು 1948 ಮತ್ತು 1974 ರ ನಡುವೆ 25,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಗಿನ್ನೆಸ್ ವರ್ಲ್ಡ್​ ರೆಕಾರ್ಡ್ ಕೂಡ ಮಾಡಿದ್ದರು.

RELATED ARTICLES

Related Articles

TRENDING ARTICLES