Friday, December 27, 2024

ಕೋವಿಡ್ ಹಿನ್ನಲೆ ಅಂಬಿಗರ ಚೌಡಯ್ಯನ ಉತ್ಸವ ಸರಳ ಅಚರಣೆ

ಹಾವೇರಿ : ಸರ್ಕಾರದ ಕೋವಿಡ್ ಮಾರ್ಗಸೂಚಿ ಹಿನ್ನೆಲೆ ಪ್ರಸಕ್ತ ವರ್ಷದ ನಿಜಶ ‘ರಣ ಅಂಬಿಗರ ಚೌಡಯ್ಯನವರ 4ನೇ ಶರಣ ಸಂಸ್ಕೃತಿ ಉತ್ಸವ ವನ್ನು ಸರಳವಾಗಿ ಆಚರಿಸಲಾಗುತಿದ್ದು, ಭಕ್ತಾದಿಗಳು ತಮ್ಮತಮ್ಮ ಮನೆಗಳಲ್ಲಿ ಅಂಬಿಗರ ಚೌಡ ಯ್ಯನವರ ಭಾವಚಿತ್ರವನ್ನಿಟ್ಟು ಪೂಜಿಸಬೇಕೆಂದು ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹಾವೇರಿಯಲ್ಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಹಾಗೂ ಕೋವಿಡ್ ಮಾರ್ಗಸೂಚಿಯನ್ವಯ ನಿಜಶರಣ ಅಂಬಿಗರ ಚೌಡಯ್ಯನವರ 4ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಜ.14 ಮತ್ತು ಜ.15 ರಂದು ನರಸೀಪುರದಲ್ಲಿ ಜರುಗುವ ಕಾರ್ಯಕ್ರಮಗಳು ಅತ್ಯಂತ ಸರಳ ಹಾಗೂ ಸಾಂಪ್ರದಾಯಕವಾಗಿ ಜರುಗಲಿವೆ. ಶರಣ ಸಂಸ್ಕೃತಿ ಉತ್ಸವದಲ್ಲಿ ನಡೆಯ ಬೇಕಿದ್ದ ಮಹಾರಥೋತ್ಸವ, ಧರ್ಮಸಭೆ ಹಾಗೂ ಸಾಮೂಹಿಕ ವಿವಾಹಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಉತ್ಸವದಲ್ಲಿ ಭಾಗವಹಿಸುವ ಸಾರ್ವ ಜನಿಕರು ಹೆಚ್ಚಿನ ಸ೦ಖ್ಯೆಯಲ್ಲಿ ಪಾಲ್ಗೊಳ್ಳದೇ, ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ಸೋಂಕು ನಿಯಂತ್ರಿಸಲು ಎಲ್ಲ ಭಕ್ತರು ಸಹಕರಿಸಬೇಕು ಎಂದು ಹೇಳಿದರು.

RELATED ARTICLES

Related Articles

TRENDING ARTICLES