Wednesday, January 22, 2025

ಸೈನಾ ಕ್ಷಮೆಯಾಚಿಸಿದ ತಮಿಳು ನಟ ಸಿದ್ದಾರ್ಥ್

​​​​​ದೇಶ : ತಮಿಳು ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿನ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದರು. ತನ್ನ ವರ್ತನೆಗೆ ನೆಹ್ವಾಲ್ ಅವರಿಗೆ ಪತ್ರ ಬರೆದು ಸೋಶಿಯಲ್ ಮೀಡಿಯಾದಲ್ಲೇ ಕ್ಷಮೆಯಾಚಿಸಿದ್ದಾರೆ.

ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ.

RELATED ARTICLES

Related Articles

TRENDING ARTICLES