Sunday, December 22, 2024

ನೀರಿಗಾಗಿ ಪಾದಯಾತ್ರೆ ಮಾಡುತ್ತಿಲ್ಲ :ಸಚಿವ ಬಿ.ಶ್ರೀ ರಾಮುಲು

ಚಿತ್ರದುರ್ಗ : ಮೇಕೆದಾಟು ಪಾದಯಾತ್ರೆ ಕುರಿತು ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕರು ನೀರಿಗಾಗಿ ಪಾದಯಾತ್ರೆ ಮಾಡುತ್ತಿಲ್ಲ, ಕುರ್ಚಿಗಾಗಿ ಮಾಡ್ತಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಪಾದಯಾತ್ರೆ ನಡೆಯುತ್ತಿದೆ.ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಹೊಡೆಯುವ ಯತ್ನ ಡಿಕೆಶಿ ಮಾಡುತ್ತಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರ್ ಸ್ವಾಮಿ, ಬಿಜೆಪಿ ಹೊಡೆಯಲು ಒಂದೇ ಕಲ್ಲಿನಲ್ಲಿ ಹೊಡೆಯಲು ಪ್ಲಾನ್ ಮಾಡಿದ್ದಾರೆ. ಡಿಕೆಶಿ ಅವರು ಸಿಎಂ ಆಗಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಅವರ ವರ್ಚಸ್ಸು ಕಡಿಮೆ ಮಾಡಲು ಡಿಕೆಶಿ ಪಾದಯಾತ್ರೆ ಮಾಡುತ್ತಿದ್ದಾರೆ. ವರ್ಚಸ್ಸು ಕಡಿಮೆ ಆಗದಂತೆ ಸಿದ್ದರಾಮಯ್ಯ ಅವರು ಕೂಡಾ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.ಕೊವೀಡ್ ವೇಳೆಯೂ ಸ್ವಾರ್ಥಕ್ಕಾಗಿ ಸಿಎಂ ಆಗಬೇಕು ಎಂದು ಪ್ರತಿ ಪಕ್ಷಗಳು ಬೇಜಬ್ದಾರಿಯಾಗಿ ನಡೆದುಕೊಳ್ಳುತ್ತಿದೆ.ಆರೋಗ್ಯದ ಮೇಲೆ ಕಾಂಗ್ರೆಸ್ ನಾಯಕರು ಚೆಲ್ಲಾಟ ಆಡುತ್ತಿದ್ದಾರೆ.ಕಾನೂನು ಮಾತನಾಡುವ ಕಾಂಗ್ರೆಸ್ ನಾಯಕರು ಕೊವೀಡ್ ಮಾರ್ಗಸೂಚಿ ಗಾಳಿಗೆ ತೂರಿದ್ದಾರೆ.ಸರ್ಕಾರ ಬರುತ್ತದೆ ಎಂಬ ಹಗಲುಗನಸು ಕಂಡು ಸ್ವಾರ್ಥಕ್ಕಾಗಿ ರಾಜಕಾರಣ ಮಾಡ್ತಿದ್ದಾರೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES