Wednesday, January 22, 2025

ಮೀಟೂ ಆರೋಪ ನಟ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್

ಬೆಂಗಳೂರು : ಚಿತ್ರರಂಗದಲ್ಲಿ ತಲ್ಲಣ ಸೃಷ್ಟಿ ಮಾಡಿದ ಮೀಟೂ ಕೇಸ್​ನಲ್ಲಿ ನಟಿ ಶ್ರುತಿ ಹರಿಹರನ್ ಅವರಿಗೆ ಹಿನ್ನಡೆ ಆಗಿದೆ.

ಕೇಸ್ ದಾಖಲಾಗಿ ಮೂರು ವರ್ಷ ಕಳೆದರೂ ನಟ ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಿ ಸಿಕ್ಕಿಲ್ಲ.ಆ ಕಾರಣದಿಂದಾಗಿ ಕಬ್ಬನ್ ಪಾರ್ಕ್​ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.ವಿಸ್ಮಯ ಸಿನೆಮಾ ಚಿತ್ರೀಕರಣ ವೇಳೆ ಅರ್ಜುನ್ ಸರ್ಜಾ ಅವರಿಂದ ತಮಗೆ ಲೈಂಗಿಕ ಕಿರುಕುಳ ಆಗಿತ್ತು ಎಂದು ಶ್ರುತಿ ಹರಿಹರನ್ ಆರೋಪಿಸಿದ್ದರು.ಆದರೆ ಸೂಕ್ತ ಸಾಕ್ಷಿ ಸಿಗದ ಕಾರಣ ಅರ್ಜುನ್ ಸರ್ಜಾ ಅವರಿಗೆ ಈ ಕೇಸ್​ನಿಂದ ಬಿಗ್ ರಿಲೀಫ್ ಸಿಗುವ ಸಾಧ್ಯತೆ ದಟ್ಟವಾಗಿದೆ.

ವಿಸ್ಮಯ ಸಿನೆಮಾದಲ್ಲಿ ಅರ್ಜುನ್ ಸರ್ಜಾ ಮತ್ತು ಶ್ರುತಿ ಹರಿಹರನ್ ತೆರೆಹಂಚಿಕೊಂಡಿದ್ದರು. ಈ ಸಿನೆಮಾದ ಶೂಟಿಂಗ್ ವೇಳೆ ಅರ್ಜುನ್ ಸರ್ಜಾ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಶ್ರುತಿ ಹರಿಹರನ್ ಆರೋಪಿಸಿದ್ದರು. ಆದರೆ ಈ ಆರೋಪಕ್ಕೆ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ.ಸೂಕ್ತ ಸಾಕ್ಷ್ಯಧಾರಗಳ ಕೊರತೆ ಇರುವ ಕಾರಣ, ಕಬ್ಬನ್ ಪಾರ್ಕ್​ ಪೊಲೀಸರು ಬಿ-ರಿಪೋರ್ಟ್​ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES