Tuesday, December 24, 2024

ಹಿರಿಯ ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​ ಖರ್ಗೆಗೆ ಕೋವಿಡ್​ ಸೋಂಕು ದೃಢ

ಬೆಂಗಳೂರು : ಕಾಂಗ್ರೆಸ್​ನ ಹಿರಿಯ ಮುಖಂಡ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಕೋವಿಡ್​​ 19 ಸೋಂಕು ಇರುವುದು ದೃಢಪಟ್ಟಿದ್ದು, ಹೋಂ ಐಸೋಲೇಷನ್​ನಲ್ಲಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ ಪಾದಯಾತ್ರೆ ನಡೆಸುತ್ತಿದೆ. ಈ ಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ಮಲ್ಲಿಕಾರ್ಜುನ್​ ಖರ್ಗೆ ಅವರು ಮೊದಲ ದಿನದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ತಗುಲಿರಬಹುದು.

ಸದ್ಯ 5ನೇ ದಿನ ಪಾದಯಾತ್ರೆ ನಡೆಯುತ್ತಿದ್ದು ಹಲವು ಕಾಂಗ್ರೆಸ್​ ಮುಖಂಡರು ಪಾಲ್ಗೊಂಡಿದ್ದು, ಮುಂದಿನ ದಿನಗಳಲ್ಲಿ ಮತಷ್ಟು ಮಂದಿಗೆ ಕೊರೊನಾ ಸೋಂಕು ದೃಢಪಟ್ಟರೇ ಅಚ್ಚರಿ ಇಲ್ಲ.

RELATED ARTICLES

Related Articles

TRENDING ARTICLES