Thursday, January 23, 2025

ಡಾಲಿ ‘ಹೊಯ್ಸಳ’ ಕಾಪ್​​​

ರಾಜ್ಯ : ಕನ್ನಡ ಹಾಗೂ ತೆಲುಗು ಭಾಷೆಯ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟ ಡಾಲಿ ಧನಂಜಯ್​ಗೆ ಬೇಡಿಕೆ ಹೆಚ್ಚಾಗಿದೆ. ಸದ್ಯ ‘ಬಡವ ರಾಸ್ಕಲ್’ ಸಿನಿಮಾ ಸಕ್ಸಸ್ ಖುಷಿಯಲ್ಲಿರೋ ಡಾಲಿ ಸಂಕ್ರಾಂತಿ ಹಬ್ಬಕ್ಕೆ ಹೊಸ ಸಿನಿಮಾವನ್ನ ಅನೌನ್ಸ್ ಮಾಡಿದ್ದಾರೆ.

ಈ ಸಿನಿಮಾಗೆ ‘ಹೊಯ್ಸಳ’ ಅಂತಾ ಟೈಟಲ್ ಇಡಲಾಗಿದೆ. ಇದು ಧನಂಜಯ್ ನಟನೆಯ 25ನೇ ಚಿತ್ರವಾಗಿದೆ. ಸಲಗ ಸಿನಿಮಾ ಬಳಿಕ ಮತ್ತೆ ಧನಂಜಯ್​ ಪೊಲೀಸ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬೆಳಗಾವಿಯ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ಹೆಣೆದಿರುವ ಕಥೆ ಇದಾಗಿದೆ. ಡಾಲಿ ಧನಂಜಯ್​ರ 25ನೇ ಸಿನಿಮಾಈ ಹಿಂದೆ ‘ಗೀತಾ’ ಸಿನಿಮಾವನ್ನ ನಿರ್ದೇಶನ ಮಾಡಿದ್ದ ವಿಜಯ್ ಎನ್ ಅವರೇ ಹೊಯ್ಸಳ ಚಿತ್ರವನ್ನ ನಿರ್ದೇಶಿಸುತ್ತಿದ್ದಾರೆ. ದೀಪು.ಎಸ್.ಕುಮಾರ್ ಸಂಕಲನ ಹಾಗೂ ಮಾಸ್ತಿ ಅವರ ಸಂಭಾಷಣೆಯಲ್ಲಿ ಚಿತ್ರ ಮೂಡಿಬರಲಿದೆ.

RELATED ARTICLES

Related Articles

TRENDING ARTICLES