Thursday, December 19, 2024

ಜ.23ರಿಂದಲೇ ಗಣರಾಜ್ಯ ಸಂಭ್ರಮ

ದೇಶದಲ್ಲಿ ಇದುವರೆಗೆ ಗಣರಾಜ್ಯೋತ್ಸವ ದಿನಾಚರಣೆಯನ್ನು ಜನವರಿ 24ರಿಂದ ಆರಂಭಿಸಲಾಗುತ್ತಿತ್ತು. ಆದ್ರೆ, ಕೇಂದ್ರ ಸರ್ಕಾರ ಈಗ ಜನವರಿ 23ರಿಂದಲೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಆಚರಿಸೋದಕ್ಕೆ ಸೂಚಿಸಿದೆ ಎನ್ನಲಾಗಿದೆ.

ಈ ಕುರಿತಂತೆ ಕೇಂದ್ರ ಸರ್ಕಾರದ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಪ್ರಯುಕ್ತ, ಅಂದಿನಿಂದಲೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಪ್ರಾರಂಭಿಸುವಂತೆ ಸೂಚಿಸಿದೆ ಎನ್ನಲಾಗಿದೆ.

ಕೋವಿಡ್ ಮಾರ್ಗಸೂಚಿ ಅನುಸರಿಸಿ, ಕಳೆದ ವರ್ಷ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಜನವರಿ 24ರ ಬದಲಾಗಿ ಜನವರಿ 23ರಿಂದಲೇ ಗಣರಾಜ್ಯೋತ್ಸವ ಸಂಭ್ರಮ ಗರಿಗೆದರಲಿದೆ.

RELATED ARTICLES

Related Articles

TRENDING ARTICLES