Sunday, December 22, 2024

ನಾನು ಸ್ವಲ್ಪ ಸೈಕೋ – ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು ಒಂದಲ್ಲಾ ಒಂದು ವಿಚಾರವಾಗಿ ಸಖತ್ ಸುದ್ದಿಯಲ್ಲಿರುತ್ತಾರೆ.ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿರುವ ರಶ್ಮಿಕಾ ಕ್ಯಾಪ್ಷನ್ ಅಭಿಮಾನಿಗಳ ತಲೆಯಲ್ಲಿ ಹುಳು ಬಿಟ್ಟಂತಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವರ್ಕೌಟ್ ವೀಡಿಯೋಗಳನ್ನು ರಶ್ಮಿಕಾ ಹಂಚಿಕೊಳ್ಳುತ್ತಿದ್ದಾರೆ. ಅದರಂತೆ ಈ ಬಾರಿ ವೀಕೆಂಡ್ ಜಿಮ್​ನಲ್ಲಿ ಕಳೆದಿದ್ದಾರೆ. ಪುಷ್ಪ ಸಿನೆಮಾ ಸಕ್ಸಸ್ ನಂತರ ಅವರಿಗೆ ಸಾಕಷ್ಟು ಸಿನಿಮಾಗಳಿಗೆ ಆಫರ್ ಬರುತ್ತಿವೆ.

ನಾನು ಜಿಮ್​ನಲ್ಲಿಯೇ ಜೀವಿಸುವ ಸೈಕೋ ಅಂತ ಸಾಬೀತಾಯಿತು ಎಂದು ಅವರು ಕ್ಯಾಪ್ಷನ್ ನೀಡಿದ್ದು, ಜಿಮ್​ನಲ್ಲಿ ನಿಂತು ಕ್ಲಿಕ್ಕಿಸಿರುವ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪುಷ್ಪ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಬಹುಬೇಡಿಕೆಯ ನಟಿಯರ ಸಾಲಿನಲ್ಲಿ ರಶ್ಮಿಕಾ ಕೂಡಾ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES