Thursday, January 23, 2025

10 ದಿನ ಐಸಿಯುನಲ್ಲಿ ಲತಾ ಮಂಗೇಶ್ಕರ್

ದೇಶ : ಕೊವಿಡ್ ಕಾರಣದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​ ಅವರಿಗೆ ಐಸಿಯುನಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ನಿಧಾನವಾಗಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನೂ ಸುಮಾರು 10 ದಿನಗಳ ಕಾಲ ವಿಶೇಷ ನಿಗಾದಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ. ಆ ಬಳಿಕ ಅವರನ್ನು ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವ ಸಾಧ್ಯತೆ ಇದೆ. ಈಗ ಅವರ ಆರೋಗ್ಯ ಸುಧಾರಿಸಿಕೊಳ್ಳುತ್ತಿರುವ ಬಗ್ಗೆ ವೈದ್ಯರಿಂದ ಮಾಹಿತಿ ಸಿಕ್ಕಿರುವುದಕ್ಕೆ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಲತಾ ಮಂಗೇಶ್ಕರ್​ ಆರೋಗ್ಯ ಸಂಪೂರ್ಣ ಸ್ಥಿರವಾಗಿದೆ. ದೇವರು ನಿಜವಾಗಿಯೂ ಕರುಣಾಮಯಿ. ಲತಾ ಮಂಗೇಶ್ಕರ್​ ಅವರಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ’ ಎಂದು ಲತಾ ಮಂಗೇಶ್ಕರ್​ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES