Sunday, January 19, 2025

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್​​ಗೆ ರಸ್ತೆ ಅಪಘಾತ

ಬೆಂಗಳೂರು : ಸೋಮವಾರ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಇನ್​ಸ್ಟಾಗ್ರಾಮ್​ ಸ್ಟೇಟಸ್​ ಮೂಲಕ ದಿವ್ಯಾ ಸುರೇಶ್‌ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಲಸಿಕೆ ಪಡೆದು ಮನೆಗೆ ಮರಳುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ನೆಲಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಕೆನ್ನೆ ಮತ್ತು ದವಡೆ ಭಾಗಕ್ಕೆ ಪೆಟ್ಟು ಬಿದ್ದಿದೆ. ಸದ್ಯ ಮನೆಯಲ್ಲಿ ದಿವ್ಯಾ ಸುರೇಶ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅಲ್ಲದೇ ಪ್ರಾಣಾಪಾಯದಿಂದ ದಿವ್ಯಾ ಸುರೇಶ್ ಪಾರಾಗಿದ್ದಾರೆ. ಸದ್ಯ ಅವರ ಅಭಿಮಾನಿಗಳು ಬೇಗ ಗುಣಮುಖರಾಗಲಿ ಎಂದು ಕೋರುತ್ತಿದ್ದಾರೆ.

ನಟಿ ದಿವ್ಯಾ ಸುರೇಶ್ ಅವರು ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ಕ್ಕೆ ಎಂಟ್ರಿ ಕೊಡುವ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಫಿನಾಲೆ ಪ್ರವೇಶಿಸುವ ಮೂಲಕ ದಿವ್ಯಾ ಸುರೇಶ್​ ಜನಪ್ರಿಯತೆ ಹೆಚ್ಚಿತು. ಮಂಜು ಪಾವಗಡ ಅವರ ಜತೆಗಿನ ಫ್ರೆಂಡ್​ಶಿಪ್​ ಮೂಲಕವೂ ಅವರು ಹೆಚ್ಚು ಸುದ್ದಿ ಆದರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತಿವೆ. ಕಲರ್ಸ್​ ಕನ್ನಡದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ.

RELATED ARTICLES

Related Articles

TRENDING ARTICLES