ಭಾರತದ ಟೆಸ್ಟ್ ಕ್ರಿಕೆಟ್ ತಂಡವನ್ನು ಮುನ್ನಡೆಸುವುದು ದೊಡ್ಡ ಜವಾಬ್ದಾರಿ ನೀಡಲಾಗಿದೆ ಎಂದು ಕೆ.ಎಲ್.ರಾಹುಲ್ ಖುಷಿ ಪಟ್ಟಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯವಾದ ಬಳಿಕ ವಿರಾಟ್ ಕೊಹ್ಲಿ, ಟೆಸ್ಟ್ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಸದ್ಯ ದಕ್ಷಿಣಾ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ನಾಯಕರಾಗಿದ್ದು, ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಪಾರ್ಲ್ನ ಬೋಲ್ಯಾಂಡ್ ಪಾರ್ಕ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಉಭಯ ತಂಡದ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಪತ್ರಿಕಾಗೋಷ್ಠಿ ನಡೆಸಿದ್ದು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ರೋಹಿತ್ ಶರ್ಮಾ ಇಂಜುರಿಯಿಂದಾಗ ಆಫ್ರಿಕಾ ಸರಣಿಯಿಂದ ಹೊರಗುಳಿದ ಕಾರಣ ಈ ಸರಣಿಯನ್ನು ಕೆ.ಎಲ್.ರಾಹುಲ್ ಮುನ್ನೆಡೆಸುತ್ತಿದ್ದಾರೆ.ಇನ್ನು, ವೇಗಿ ಜಸ್ಪ್ರೀತ್ ಬುಮ್ರಾ ಉಪ ನಾಯಕನ ಪಟ್ಟ ಅಲಂಕರಿಸಿದ್ದಾರೆ. ಈಗಾಗಲೇ ಬುಮ್ರಾ ಪತ್ರಿಕಾಗೋಷ್ಠಿ ನಡೆಸಿ ಒಂದಿಷ್ಟು ವಿಚಾರ ಹೇಳಿದ್ದು, ಮೊಹಮ್ಮದ್ ಸಿರಾಜ್ ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿದ್ದಾರೆಂದು ತಿಳಿಸಿದ್ದಾರೆ. ಸದ್ಯ ರಾಹುಲ್ ಮಾತನಾಡಿದ್ದು ತನ್ನ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಕಳೆದ 14-15 ತಿಂಗಳುಗಳಿಂದ ನಾನು ಬೇರೆಬೇರೆ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ್ದೇನೆ. ಅದು ತಂಡಕ್ಕಾಗಿ. ಆದರೆ, ಈಗ ರೋಹಿತ್ ಶರ್ಮಾ ಇಲ್ಲದ ಕಾರಣ ಟಾಪ್ ಆರ್ಡರ್ನಲ್ಲಿ ಬ್ಯಾಟಿಂಗ್ ಮಾಡುತ್ತೇನೆ,ಎಂದು ಹೇಳಿದ್ದಾರೆ. ಹೀಗಾಗಿ ಓಪನರ್ ಆಗಿ ರಾಹುಲ್ ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನು, ನಾಯಕತ್ವ ತೊರೆದ ವಿರಾಟ್ ಕೊಹ್ಲಿ ಸಾಧನೆಯನ್ನು ಕೊಂಡಾಡಿದರು.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಲಾಗಿದೆ. ಈ ಪೈಕಿ ಮೊದಲ ಪಂದ್ಯ ಜನವರಿ 19 ರಂದು ಪಾರ್ಲ್ನ ಬೋಲ್ಯಾಂಡ್ ಪಾರ್ಕ್ನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಎರಡನೇ ಏಕದಿನ ಪಂದ್ಯ ಇದೇ ಮೈದಾನದಲ್ಲಿ ಜನವರಿ 21 ರಂದು ಆಯೋಜಿಸಲಾಗಿದೆ. ಇದುಕೂಡ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಅಂತಿಮ ಮೂರನೇ ಏಕದಿನ ಪಂದ್ಯ ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಜನವರಿ 23 ರಂದು ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.