Friday, November 22, 2024

ಹೇಳೋರು ಕೇಳೋರು ಇಲ್ಲ ಅದಕ್ಕೆ ಹೆಚ್ಚಾಗಿದೆ : ಆರ್ ಅಶೋಕ್

ಬೆಂಗಳೂರು : ಕೋವಿಡ್ ನಿರ್ವಹಣೆಗೆ ಹೊಸ ಗೈಡ್‌ಲೈನ್ಸ್ ಸಂಬಂಧ ನಾಳೆ ಮಧ್ಯಾಹ್ನ ಒಂದು ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.

ತಜ್ಞರು, ಕೆಲ ಸಚಿವರು ನಾಳಿನ ಸಭೆಯಲ್ಲಿ ಭಾಗಿಯಾಗ್ತಾರೆ. ನೈಟ್, ವೀಕೆಂಡ್ ಕರ್ಫ್ಯೂ ತೆಗೆಯುವಂತೆ ಸಲಹೆ ನೀಡಿದ್ದಾರೆ. ಕೆಲ ಕಾಂಗ್ರೆಸ್ ನಾಯಕರು ಈ ಬಗ್ಗೆ ನಮಗೆ ಸಲಹೆಯನ್ನು ನೀಡಿದ್ದಾರೆ. ಕುಮಾರಸ್ವಾಮಿ ಶಾಲೆ ಮುಚ್ಚುವಂತೆಯೂ ಸಲಹೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಲಹೆ, ತಜ್ಞರು ನೀಡಿಲುವ ಸಲಹೆ, ನಾಯಕರು ನೀಡಿರುವ ಸಲಹೆಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

ಜನರ ಜೀವ, ಜೀವನ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸುತ್ತೇವೆ. ನಾಳೆ ಮಧ್ಯಾಹ್ನ 2 ಗಂಟೆ ವೇಳೆಗೆ ಸ್ಪಷ್ಟ ಮಾಹಿತಿ ಸಿಗುತ್ತದೆ. ಅಮೆರಿಕದಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ. ಹೀಗಾಗಿ ಅಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. ಸಾವುಗಳು ಕೂಡ ಹೆಚ್ಚಾಗಿವೆ.

ಆದರೆ ರಾಜ್ಯದಲ್ಲಿ ಅಂತಹ ಯಾವುದೇ ಘಟನೆ ನಡೆಯಬಾರದು. ಬ್ಯುಸಿನೆಸ್ ಒಂದೇ ದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನಿಸಲ್ಲ. ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನಿಸುತ್ತೇವೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES