Monday, December 23, 2024

ಗಡಿಯಲ್ಲಿ ನಕಲಿ ಕೋವಿಡ್ ರಿಪೋರ್ಟ್ : ನಾಲ್ವರು ಮೇಲೆ ಎಫ್ಐಆರ್

ಚಾಮರಾಜನಗರ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿನ ಕೇರಳ ಗಡಿ ಮೂಲೆಹೊಳೆ ಚೆಕ್‍ಪೋಸ್ಟ್​​​ನಲ್ಲಿ ನಕಲಿ ಕೋವಿಡ್ ರಿಪೋರ್ಟ್ ತೋರಿಸಿ ವಂಚಿಸಿದ್ದ ನಾಲ್ವರು ಕೇರಳಿಗರ ವಿರುದ್ಧ ಗುಂಡ್ಲುಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿ ಚುರುಕು ಮುಟ್ಟಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೇರಳದ ಗಡಿ ಮೂಳೆಹೊಳೆ ಚೆಕ್‍ಪೋಸ್ಟ್​​​ನಲ್ಲಿ ನಕಲಿ ರಿಪೋರ್ಟ್ ಇಟ್ಟುಕೊಂಡು ಆಟವಾಡುತ್ತಿದ್ದ ನಾಲ್ವರನ್ನು ಕೇರಳ ರಾಜ್ಯದ ನಿವಾಸಿಗಳನ್ನ ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕೋಝಿಕೋಡ್ ನಿವಾಸಿಗಳಾದ ವಿಜಯ್, ಜಯಪ್ರಕಾಶ್, ಸಂತೋಷ್ ಹಾಗೂ ವಿಜಯನ್ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 1860 ರ ಅಡಿ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಒಂದೇ SRFID ಬಳಸಿಕೊಂಡು ಈ ನಾಲ್ವರು ಮೂರು ಕೋವಿಡ್ ನೆಗೆಟಿವ್ ರಿಪೋರ್ಟ್​​ಗಳನ್ನು ಮನೆಯಲ್ಲೇ ಪ್ರಿಂಟ್ ಮಾಡಿಕೊಂಡು ಬಂದಿರುವುದು ಪರಿಶೀಲನೆ ವೇಳೆ ತಿಳಿದು ಬಂದಿರುವುದರಿಂದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಬರಬೇಕಾದರೇ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಕೆಲವರು ಕಳ್ಳಾಟ ಆಡಲು ಆರಂಭಿಸಿದ್ದಾರೆ.

RELATED ARTICLES

Related Articles

TRENDING ARTICLES