Monday, December 23, 2024

25 ಮಕ್ಕಳಿಗೆ ಸೋಂಕು ಬಂದ್ರೆ ಏಳು ದಿನ ಶಾಲೆ ಬಂದ್​​ : ಬಿ.ಸಿ.ನಾಗೇಶ್

ಕರ್ನಾಟಕ : ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಜ.29ರವರೆಗೆ ಶಾಲೆ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಜ.29ರಂದು ಮತ್ತೆ ಸಭೆ ನಡೆಸಿ ಶಾಲೆ ಓಪನ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಜೊತೆ ಸಭೆ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ ನಡೆಯುತ್ತದೆ. ಮಕ್ಕಳಿಗೆ ಸೋಂಕು ಹೆಚ್ಚಾದರೆ ಮಾತ್ರ ಶಾಲೆ ಬಂದ್‌ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಸೋಂಕು ಹೆಚ್ಚಳವಾದರೆ ಮೂರು ದಿನ ಅಥವಾ 7 ದಿನ ಮಾತ್ರ ಶಾಲೆ ಬಂದ್‌ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಐದು ಮಕ್ಕಳಿಗೆ ಸೋಂಕು ಬಂದ್ರೆ ಮೂರು ದಿನ ಶಾಲೆ ಬಂದ್​ ಮಾಡಲಾಗುವುದು, ಹೆಚ್ಚು ಮಕ್ಕಳಿಗೆ ಸೋಂಕು ಬಂದರೆ, ಅಂದರೆ 25-30 ಮಕ್ಕಳಿಗೆ ಸೋಂಕು ಬಂದ್ರೆ 7 ದಿನ ಶಾಲೆ ಬಂದ್‌ ಮಾಡಲಾಗುವುದು.

ಶಾಲೆ ಬಂದ್ ಬಗ್ಗೆ ಸ್ಥಳೀಯ ಅಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈವರೆಗೆ ರಾಜ್ಯದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗಿದೆ. ಈ ಪೈಕಿ ಶೇ.5ರಷ್ಟು ಮಕ್ಕಳಿಗೆ ಮಾತ್ರ ಸೋಂಕು ಪತ್ತೆ ಆಗಿದೆ. ತುಮಕೂರು, ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES