Thursday, January 9, 2025

ಉತ್ತರಪ್ರದೇಶಕ್ಕೆ ನಾನೇ ಸಿಎಂ ಅಭ್ಯರ್ಥಿ : ಪ್ರಿಯಾಂಕಾ ಗಾಂಧಿ

ಉತ್ತರಪ್ರದೇಶಕ್ಕೆ ನಾನೇ ಸಿಎಂ ಮುಖ ಎಂದು ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳು ನಿಮ್ಮ ಪಕ್ಷದ ಯುಪಿ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ಕಾಂಗ್ರೆಸ್ ಪಕ್ಷದಿಂದ ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ?.ನೀವು ಎಲ್ಲೆಡೆ ನನ್ನ ಮುಖವನ್ನು ನೋಡುತ್ತಿದ್ದೀರಿ’ ಎಂದು ಪ್ರಿಯಾಂಕಾ ಗಾಂಧಿ ತನ್ನ ಸಹೋದರ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದರು.

ಈ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿಯ ಅಭ್ಯರ್ಥಿ ಎಂದು ಸುಳಿವು ನೀಡಿದ್ದಾರೆ.

RELATED ARTICLES

Related Articles

TRENDING ARTICLES