Wednesday, January 22, 2025

ತಮಿಳುನಾಡಿಗೆ ಆ ಯೋಜನೆ ಕೈಗೆತ್ತಿಕೊಳ್ಳಲು ಬಿಡೋದಿಲ್ಲ : ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯವರು ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದು ಪತ್ರಿಕಾ ವರದಿಯ ಮೂಲಕ ಗಮನಕ್ಕೆ ಬಂದಿದೆ ಇದನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಕಾವೇರಿ ಕಣಿವೆಯಲ್ಲಿ ನ್ಯಾಯಾಧಿಕರಣ ಹಾಗೂ ಸರ್ವೋಚ್ಛ ನ್ಯಾಯಾಲಯದ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಸದರಿ ಯೋಜನೆಯು ವಿವರಗಳನ್ನು ನ್ಯಾಯಾಧೀಕರಣ ಅಥವಾ ಸರ್ವೋಚ್ಛ ನ್ಯಾಯಾಲಯದ ಮುಂದೆ ಪ್ರಸ್ತುತ ಪಡಿಸದೇ ಇರುವ ತಮಿಳುನಾಡಿನ ಯಾವುದೇ ಯೋಜನೆಯನ್ನು ಕರ್ನಾಟಕ ಸರ್ಕಾರ ವಿರೋಧಿಸುತ್ತದೆ.
ಈ ಯೋಜನೆಯನ್ನು ಕರ್ನಾಟಕ ಸರ್ಕಾರ ಎಲ್ಲಾ ಕಾನೂನಾತ್ಮಕ ಕ್ರಮಗಳ ಮೂಲಕ ಆಕ್ಷೇಪಿಸಲಿದೆ.

ತಮಿಳುನಾಡು ಪ್ರಕಟಿಸಿರುವ ಯೋಜನೆ ಕರ್ನಾಟಕ ಮತ್ತು ತಮಿಳುನಾಡು ಎರಡು ರಾಜ್ಯಗಳ ಭೌಗೋಳಿಕ ವ್ಯಾಪ್ತಿಯಲ್ಲಿ ಇರುವುದರಿಂದ ಯಾವುದೇ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ವಿವಿಧ ಆಯಾಮಗಳಲ್ಲಿ ಹಾಗೂ ಕಾನೂನಾತ್ಮಕ ಪರಿಶೀಲನೆಗೆ ಒಳಪಡಬೇಕಾಗುತ್ತದೆ.

ತಮಿಳುನಾಡು ಏಕಪಕ್ಷೀಯವಾಗಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಹೊಗೇನಕಲ್ ಪ್ರದೇಶವು ಕರ್ನಾಟಕ ಮತ್ತು ತಮಿಳುನಾಡಿನ ಜಂಟಿ ಗಡಿ ಪ್ರದೇಶದಲ್ಲಿ 64 ಕಿ.ಮೀ. ಉದ್ದದ ಭೂ ಪ್ರದೇಶದ ವ್ಯಾಪ್ತಿಯನ್ನು ಹೊಂದಿರುತ್ತದೆ.

ಕಾವೇರಿ ನ್ಯಾಯಾಧಿಕರಣದ ಐತೀರ್ಪಿನ ಕಲಂ 13ರನ್ವಯ ಈ ಯೋಜನೆಯನ್ನು ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ಮೂಲಕ ಕೈಗೆತ್ತಿಕೊಳ್ಳಬೇಕಾಗುವುದು. ಮತ್ತು ಕರ್ನಾಟಕ ಮತ್ತು ತಮಿಳುನಾಡಿನ ಹೊಗೇನಕಲ್ ಜಂಟಿ ಗಡಿ ರೇಖೆಯನ್ನು Survey of India ಮೂಲಕ ಅಂತಿಮಗೊಳಿಸಲಾಗಿಲ್ಲ.

RELATED ARTICLES

Related Articles

TRENDING ARTICLES