Monday, December 23, 2024

ಜೈಲಲ್ಲೇ ಎಫ್ಎಂ, ಕೈದಿಗಳೇ ಆರ್ ಜೆ

ಕಲಬುರಗಿ : ಕೈದಿಗಳು ತಮ್ಮ ನೋವು-ನಲಿವು ಚಿತ್ರಗಳನ್ನು ಹಂಚಿಕೊಳ್ಳುವುದಕ್ಕೆ ಮತ್ತು ಹೊರಜಗತ್ತಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯಲು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಎಫ್ ಎಂ ರೇಡಿಯೋ ಆರಂಭಿಸಲು ಸಿದ್ಧತೆ ನಡೆದಿದೆ.

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ನೂತನ ಕಾರ್ಯಕ್ರಮ ಮಾಡುತ್ತಿರುವ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಈ ಯೋಜನೆಯು ಬೆಂಗಳೂರಿನಲ್ಲಿರುವ ಸಾಫ್ಟ್ವೇರ್ ಕಂಪನಿಯ ಸಿಎಸ್ಆರ್ ನಿಧಿ ಅಡಿ ಕೇಂದ್ರ ಸ್ಥಾಪನೆಗೆ ಅಗತ್ಯವಾದ ಅನುದಾನ ಒದಗಿಸಲಾಗಿದೆ. ಹಾಗೂ ಇಲ್ಲಿ ಆರ್​ ಜೆ ಗಳಾಗಿ ಕೆಲವು ಕೈದಿಗಳೇ ಕಾರ್ಯನಿರ್ವಹಿಸಲಿದ್ದಾರೆ. ಮತ್ತು ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ನೀಡಲು ಯೋಜಿಸಲಾಗಿದೆ. ಇವರು ಎಫ್ಎಂ ಕೇಂದ್ರದ ನಿರ್ವಹಣೆ ಜವಾಬ್ದಾರಿಯನ್ನು ನೋಡಿಕೊಳ್ಳಲಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕ ರಮೇಶ್ ತಿಳಿಸಿದ್ದಾರೆ.

ಕೈದಿಗಳು ಜೀವನ ಕಥೆಗಳನ್ನು ಹಂಚಿಕೊಳ್ಳುವುದೇ ಇದರ ಮೂಲ ಉದ್ದೇಶವಾಗಿದ್ದು, ಜೈಲಿನಲ್ಲಿರುವವರಿಗೆ ಹಾಗೂ ಅವರ ಬಂಧುಗಳಿಗೆ ಜನ್ಮದಿನದ ಶುಭಾಶಯ ಕೋರುವುದಕ್ಕೂ ಇಲ್ಲಿ ಅವಕಾಶವಿರುತ್ತದೆ. ಅಲ್ಲದೇ ವಿಶೇಷ ದಿನಗಳಲ್ಲಿ ಗಣ್ಯರ ಸಂದೇಶಗಳು ಯಶೋಗಾಥೆಗಳು ಹಾಗೂ ಸಮಕಾಲೀನ ವಿಷಯಗಳ ಬಗ್ಗೆ ಚರ್ಚೆಗಳನ್ನು ಮಾಡುವುದು. ಮತ್ತು ಹಬ್ಬ-ಹರಿದಿನಗಳ ಆಚರಣೆ ಹೀಗೆ ಮುಂತಾದ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಅದರ ಬಗ್ಗೆ ಕಾರ್ಯಕ್ರಮ ನಡೆಸಿಕೊಡಲಾಗಿದೆ.

ಈ ಯೋಜನೆಗೆ ಸುಮಾರು ಐದು ಲಕ್ಷಕ್ಕೂ ಹೆಚ್ಚು ವೆಚ್ಚವಾಗಲಿದೆ ಇನ್ನು 15 ದಿನಗಳಲ್ಲಿ ಎಫ್ಎಂ ರೇಡಿಯೋ ಕೇಂದ್ರ ಪ್ರಾರಂಭವಾಗಲಿದೆ ಎಂದು ರಮೇಶ್ ಪಿಎಸ್ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES