Wednesday, January 22, 2025

ಸಿದ್ದರಾಮಯ್ಯಗೆ ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ- ಹೆಚ್ಡಿಕೆ

ಬೆಂಗಳೂರು : ಜೆಡಿಎಸ್​ ಶಾಸಕರನ್ನು ಸೆಳೆದು ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್​ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ. ಅಲ್ಲದೇ, ಜೆಡಿಎಸ್​, ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯನವರೇ ನೀವು ಜೆಡಿಎಸ್‌ ಬಗ್ಗೆ ಮಾತನಾಡುತ್ತೀರಾ’ ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ.
ಹಾಗೂ ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್​ನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ಅಕ್ಕಪಕ್ಕದವರ ತಟ್ಟೆಯಲ್ಲಿರುವುದನ್ನು ಎಗರಿಸುವುದು ಸಿದ್ಧಾಂತವೇ? ʼಆಪರೇಷನ್‌ ಹಸ್ತʼವೂ ಸಿದ್ಧಾಂತವೇ? ಆಶ್ರಯ ಕೊಟ್ಟ ಪಕ್ಷವನ್ನು, ಅಲ್ಲಿನ ಮೂಲನಿವಾಸಿಗಳನ್ನು ಮುಗಿಸುವುದೇ ಸಿದ್ಧಾಂತವೇ?ನೀವು ಜೆಡಿಎಸ್‌ ಸಿದ್ಧಾಂತದ ಬಗ್ಗೆ ಮಾತನಾಡುತ್ತೀರಿ? ನಾಚಿಕೆಯಾಗಬೇಕು ನಿಮ್ಮ ಸುಳ್ಳು ನಿಮ್ಮ ರಾಜಕೀಯದ ಅಡಿಪಾಯಕ್ಕೆ. ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣದ ನಿಜಸ್ವರೂಪದಂತೆ ಕಾಣುತ್ತಿದೆ ಎಂದು ಟ್ಟಿಟ್​​ ಮೂಲಕವೇ ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES