Monday, December 23, 2024

ಟ್ವೀಟ್​ ಮೂಲಕ ಮತ್ತೆ ಸಿದ್ದು ವಿರುದ್ಧ ಸಿಡಿದ ಹೆಚ್​ಡಿಕೆ

ರಾಜ್ಯ: ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ ಎಂದು ಹೇಳಿದ್ದಾರೆ.

ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ..? ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ ಅಂತಾರೆ. ಇದು ಭ್ರಮೆಯ ಪರಮಾವಧಿ ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ, ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ.ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ನಮ್ಮ ಜತೆ ಇದ್ದಾರೆ. ಇವತ್ತಿಗೂ ಕೇಳಿಸುತ್ತಿರುವ ‘ಅರ್ಕಾವತಿ’ ಆರ್ತನಾದಕ್ಕೆ ಕಾರಣರು ಯಾರು..? ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ..? ಐದು ವರ್ಷದ ಮುಖ್ಯಮಂತ್ರಿ ಎಂಬ ಪ್ರಭಾವಳಿಯ ಕಥೆ ಏನು..? ಎಂದು ಟ್ವೀಟ್​ನಲ್ಲಿ ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

RELATED ARTICLES

Related Articles

TRENDING ARTICLES