ಬೆಳಗಾವಿ : ಉದ್ದೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ, KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಗೌಪ್ಯ ಸಭೆ ಬಗ್ಗೆ ಫೇಸ್ ಬುಕ್ ಪೋಸ್ಟ್ ಮಾಡಿರೋ ಅವರು, ಬೆಳಗಾವಿಯಲ್ಲಿ ನಡೆದ ಸಭೆ ಬಿಜೆಪಿಯ ಅಧಿಕೃತ ಸಭೆಯಲ್ಲ. ಹೀಗಾಗಿ ಈ ಸಭೆಗೆ ಹೆಚ್ಚಿನ ಮಹತ್ವ ಬೇಡ ಎಂದಿದ್ದಾರೆ.
ಸಭೆಯಲ್ಲಿ ಯಾರನ್ನ ಹೊರಗಿಟ್ಟಿರುವುದು ಎನ್ನುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯಾರು? ಎಷ್ಟು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂಬುದು ಪಕ್ಷದ ವರಿಷ್ಠರಿಗೆ ಗೊತ್ತಿದೆ. ದಿನಕ್ಕೊಬ್ಬರಂತೆ ಸಭೆ ನಡೆಸುತ್ತಾ ಹೋದರೆ ಅದಕ್ಕೆಲ್ಲ ಉತ್ತರಿಸುವ ಗೋಜಿಗೆ ಹೋಗಲ್ಲ ಎಂದು ಕಿಡಿಕಾರಿದ್ದಾರೆ.
2008 ರಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದೇನೆ, ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆ ಗೆ ಕೆಲಸ ಮಾಡುತ್ತೇವೆ ಈಗ ನಡೆದಿರುವ ವಿದ್ಯಮಾನಗಳನ್ನ ಪಕ್ಷದ ವರಿಷ್ಠರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಕಿಡಿಕಾರಿದ್ದಾರೆ.