Monday, December 23, 2024

ಸಿಎಂಗೆ ನಾಲ್ಕು ಗೋಡೆ ಮಧ್ಯೆ ಕೇಳಿದ್ದೇನೆ : ಶಾಸಕ ರೇಣುಕಾಚಾರ್ಯ

ದಾವಣಗೆರೆ : ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅವರೇ ಸಚಿವರಾಗಬೇಕಾ?. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು ಯತ್ನಾಳ್ ಎಷ್ಟು ಪ್ರಯತ್ನ ಮಾಡಿದ್ದೇವೆ.

ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಅವರು, ಕೆಲ ಸಚಿವರಂತು ಶಾಸಕರ ಫೋನ್​​ ರಿಸೀವ್ ಮಾಡಲ್ಲ. ಶಾಸಕರು ಪತ್ರ ಕೊಟ್ಟರೇ ಸಚಿವರು ಉತ್ತರ ಕೊಡಬೇಕು. ಆದ್ರೆ, ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇದರಿಂದ ನಮಗೆ ಬೇಜಾರು, ಅವಮಾನ ಆಗುತ್ತದೆ. ಇಂತಹ ಸಚಿವರು ಬೇಕಾ? ಎಂದು ಕೆಲ ಸಚಿವರ ವಿರುದ್ಧ ಶಾಸಕ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಖಾಲಿ ಇರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡಿ ಹೊಸಬರಿಗೆ ಅವಕಾಶ ಕೊಡಿ ಬರೀ ಹಳಬರನ್ನೇ ಸಂಘಟನೆಗೆ ಸೇರಿಸುವುದು ಬಿಡಿ. ಪದೆ ಪದೇ ಅವರನ್ನೆ ಸಚಿವರನ್ನಾಗಿ ಮಾಡುವುದು ಸರಿಯಲ್ಲ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಿ ಎಂದು ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಈಶ್ವರಪ್ಪ, ಬಿಎಸ್ ವೈ, ಅನಂತ್ ಕುಮಾರ್ ನನ್ನನ್ನು ಬೆಳೆಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ. ಆದರೂ ಸಿಎಂ ಬೊಮ್ಮಾಯಿ ಅವರಿಗೆ ನಾಲ್ಕು ಗೋಡೆಗಳ ಮಧ್ಯೆ ನಾನು ಕೂಡ ಸಚಿವನಾಗಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದೇನೆ ಮಾಡಿ ಎಂದು ಕೇಳಿಕೊಂಡಿದೆ ಎಂದರು. ಡಿಕೆಶಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಬ್ರಹ್ಮಲೋಕದಲ್ಲಿ ತಿರುಗಾಡುತ್ತಿದ್ದಾರೆ ಆದರೆ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರಿಗೆ ತಿಳಿದಿಲ್ಲ ಎಂದರು.

RELATED ARTICLES

Related Articles

TRENDING ARTICLES